ಮೈಸೂರು: ಮೈಸೂರು ಮಹಾನಗರ ಪಾಲಿಕೆ ಅಭಿವೃದ್ದಿ ಅಧಿಕಾರಿ, ಉಪ ಅಯುಕ್ತ ನಾಗರಾಜು ಅವರ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪ ನಾಗರಾಜು ಅವರ ವಿರುದ್ಧ ಕೇಳಿ ಬಂದ ಹಿನ್ನೆಲೆಯಲ್ಲಿ ನಗರದ ಕುವೆಂಪುನಗರ ನಿವಾಸ, ಮೈಸೂರು ಮಹಾನಗರ ಪಾಲಿಕೆ ಕಚೇರಿ, ರಾಮನಗರದ ಸಂಬಂಧಿಕರ ಮನೆಯಲ್ಲಿ ಅಧಿಕಾರಿಗಳು ಎಸಿಬಿ ಅಧಿಕಾರಿಗಳು ಬುಧವಾರ ಬೆಳಗ್ಗೆ ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರು ಎಸಿಬಿ ಎಸ್ ಪಿ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆದಿದೆ.