ಬೆಂಗಳೂರು: ಟಿಪ್ಪು ಸುಲ್ತಾನ್ ಈ ನೆಲದ ಮಣ್ಣಿನ ಮಗ ಎಂದು ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಹೇಳಿದ್ದಾರೆ.
ನಗರದಲ್ಲಿ ಬುಧವಾರ ವಿಶ್ವನಾಥ್ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ಟಿಪ್ಪು ಈ ನೆಲದ ಮಗ ವೀರ ಹೋರಾಟಗಾರ. ಟಿಪ್ಪು ಸುಲ್ತಾನ್ ಯಾವುದೇ ಪಕ್ಷ, ಜಾತಿ ಹಾಗೂ ಧರ್ಮಕ್ಕೆ ಸೇರಿದವನಲ್ಲ ಎಂದು ವಿಶ್ವನಾಥ್ ಹೇಳಿದ್ದಾರೆ.
ಪ್ರಶ್ನೆಯೊಂದಕ್ಕೆ ವಿಶ್ವನಾಥ್ ಉತ್ತರಿಸಿ, ಪಠ್ಯದಲ್ಲಿ ಟಿಪ್ಪು ಪಾಠ ಕೈ ಬಿಟ್ಟಿಲ್ಲ. ಐದನೇ ತರಗತಿಯಿಂದ ಏಳನೇ ತರಗತಿಗೆ ಹಾಕಿದ್ದಾರೆ. ಗಾಂಧೀಜಿ ಇಂದ ಟಿಪ್ಪು ತನಕ ವಿದ್ಯಾರ್ಥಿಗಳು ಎಲ್ಲವನ್ನೂ ಓದಬೇಕುಎಂದರು.
ನನ್ನನ್ನು ಮಂತ್ರಿ ಮಾಡಿ ಎಂದು ನಾನು ಕೇಳೋದಿಲ್ಲ. ಈ ಸರ್ಕಾರ ಬರೋದಕ್ಕೆ ನಾನೂ ಒಬ್ಬ ಕಾರಣ ಎಂದು ವಿಶ್ವನಾಥ್ ಮತ್ತೊಂದು ಪ್ರಶ್ನೆಗೆ ಉತ್ತರಿಸಿದರು.