ಬೆಂಗಳೂರು: ಶಿಕ್ಷಕರ ಕ್ಷೇತ್ರದ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಬುಧವಾರ ನಗರದಲ್ಲಿ ಪ್ರತಿಭಟಿಸಿದರು.
ಮೌರ್ಯ ವೃತ್ತದ ಬಳಿ ನಡೆದ ಪ್ರತಿಭಟನಾ ಸಂದರ್ಭದಲ್ಲಿ ದೇವೇಗೌಡರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಖಾಸಗಿ ಶಾಲಾ ಶಿಕ್ಷಕರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು. ಈ ಕುರಿತು ನಾನು ಮುಂದಿನ ಸಂಸತ್ ಅಧಿವೇಶನಲ್ಲಿ ಕೇಂದ್ರ ಸರ್ಕಾರದ ಗಮನಕ್ಕೂ ತರುತ್ತೇನೆ ಎಂದು ದೇವೇಗೌಡರು ಹೇಳಿದರು.
ಈ ವಿಷಯವಾಗಿ ಸಿಎಂ ಯಡಿಯೂರಪ್ಪಗೆ ಪತ್ರ ಬರೆದಿದ್ದೇನೆ. ಇಂತಹ ಸಮಯದಲ್ಲಿ ಸರ್ಕಾರ ಮಾನವೀಯತೆ ಪ್ರದರ್ಶನ ಮಾಡಬೇಕು ಎಂದರು.
ಅನುದಾನರಹಿತ ಶಿಕ್ಷಕರಿಗೆ ವಿಶೇಷ ಪ್ಯಾಕೇಜ್, ಸೇವಾಭದ್ರತೆ, ಬಾಕಿ ಆರ್ ಟಿ ಇ ಹಣ ಬಿಡುಗಡೆ, ಆರೋಗ್ಯ ವಿಮೆ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಯನ್ನು ತಕ್ಷಣ ನೆರವಿವೆರಿಸಬೇಕೆಂದು ಸರ್ಕಾರವನ್ನು ಒತ್ತಾಯಿಸಿದರು.
ರಾಷ್ಟ್ರೀಯ ಏಕರೂಪ ಶಿಕ್ಷಣ ನೀತಿಗೆ ನಮ್ಮ ವಿರೋಧವಿದೆ ಎಂದು ದೇವೇಗೌಡರು ಹೇಳಿದರು.
ಪ್ರತಿಭಟನೆಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ. ಕುಮಾರಸ್ವಾಮಿ, ಪರಿಷತ್ ಸದಸ್ಯ ಚೌಡರೆಡ್ಡಿ ತೂಪಲ್ಲಿ, ಪರಿಷತ್ ಮಾಜಿ ಸದಸ್ಯ ಟಿ ಎ ಶರವಣ ಕೆ ಟಿ ಶ್ರೀಕಂಠೇಗೌಡ ಸೇರಿದಂತೆ ಜೆಡಿಎಸ್ ಮುಖಂಡರು ಪ್ರತಿಭಟನೆ ಯಲ್ಲಿ ಭಾಗವಹಿಸಿದ್ದರು.