ಬಿಜೆಪಿಯಲ್ಲಿ ಭಿನ್ನಮತ ಇಲ್ಲ: ಬೊಮ್ಮಾಯಿ

ಚಿತ್ರದುರ್ಗ: ಬಿಜೆಪಿಯಲ್ಲಿ ವುದೇ ಭಿನ್ನಮತ ಇಲ್ಲ ಎಲ್ಲವೂ ಸರಿಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಮುರುಘಾ ಮಠದ ಆವರಣದಲ್ಲಿರುವ ಹೆಲಿಪ್ಯಾಡ್ ನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು.

ಜಿಲ್ಲಾ ಉಸ್ತುವಾರಿ ಸಚಿವರು ಮಂಡಿ ಶಸ್ತ್ರಚಿಕಿತ್ಸೆ ಪಡೆದು  ಆಸ್ಪತ್ರೆಯಲ್ಲಿದ್ದಾರೆ. ಹಾಗಾಗಿ ಕಾರ್ಯಕ್ರಮಗಳಿಗೆ ಹಾಜರಾಗುತ್ತಿಲ್ಲ ಎಂದು ತಿಳಿಸಿದರು.

ಪ್ರತಿ ಮನೆಗೆ 10 ಸಾವಿರ ಲೀಟರ್   ಉಚಿತವಾಗಿ  ನೀರು ಕೊಡುವ ಬಗ್ಗೆ ಸರ್ಕಾರ ಆಲೋಚನೆ ಮಾಡಿಲ್ಲ ಎಂದು ಪ್ರಶ್ನೆಯೊಂದಕ್ಕೆ‌ ಸಿಎಂ ಉತ್ತರಿಸಿದರು.

ಮುರುಘಾ ಮಠದ ಪ್ರಕರಣದ ಬಗ್ಗೆ ಜಿಲ್ಲಾಧಿಕಾರಿಗಳು ಸರ್ಕಾರಕ್ಕೆ  ವರದಿ ನೀಡಿರುವ ಬಗ್ಗೆ ಪ್ರತಿಕ್ರಿಯಿಸಿ ವರದಿ ಕಾನೂನು ಇಲಾಖೆಯಲ್ಲಿದೆ,ಶೀಘ್ರವೇ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಬೊಮ್ಮಾಯಿ ತಿಳಿಸಿದರು.