ಕೊರಟಗೆರೆ: ಸಮಾಜದಲ್ಲಿ ಸ್ವಾಭಿಮಾನ, ಸಮಾನತೆ ಹಾಗೂ ಜ್ಞಾನ ಗಳಿಸಲು ಶಿಕ್ಷಣ ಪ್ರಮುಖ ಸಾಧನ ಎಂದು ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಆರಗ ಜ್ಞಾನೇಂದ್ರ ಹೇಳಿದರು.
ತುಮಕೂರು ಜಿಲ್ಲೆ, ಕೊರಟಗೆರೆ ತಾಲೂಕಿನ ಕೋಳಾಲ ಗ್ರಾಮದಲ್ಲಿ, ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ನೂತನವಾಗಿ ನಿರ್ಮಿಸಲಾಗಿರುವ ಕಟ್ಟಡ ಉದ್ಘಾಟಿಸಿ ಅವರು ಮತನಾಡಿದರು.
ನಮ್ಮ ಸರಕಾರ ಗ್ರಾಮೀಣ ಭಾಗದಲ್ಲಿ ಶಿಕ್ಷಣಕ್ಕೆ ಆದ್ಯತೆ ನೀಡಿ, ಮೂಲಭೂತ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಹೆಚ್ಚಿನ ಅನುದಾನ ನೀಡುತ್ತಿದೆ ಎಂದು ತಿಳಿಸಿದರು.
ಶೈಕ್ಷಣಿಕ ಚಟುವಟಿಕೆಗಳಿಗೆ ಸರಕಾರವು ಒದಗಿಸುತ್ತಿರುವ ನೆರವು ಹಾಗೂ ಪ್ರೋತ್ಸಾಹ ವನ್ನು ಸದುಪಯೋಗ ಪಡಿಸಿಕೊಂಡು, ಸಮಾಜದ ಮುಖ್ಯ ವಾಹಿನಿಗೆ ಬರಬೇಕು, ಎಂದು ನೀಡಿದರು.
ಮಾನವೀಯ ಮೌಲ್ಯಗಳನ್ನು ರೂಢಿಸಿಕೊಂಡು, ರಾಷ್ಟ್ರದ ಆಸ್ತಿ ಯಾಗಿ, ರೂಪುಗೊಳ್ಳಬೇಕು ಎಂದೂ ಆರಗ ಜ್ಞಾನೇಂದ್ರ ಕರೆ ನೀಡಿದರು.
ಮಾಜಿ ಉಪಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್ ಮತ್ತಿತರರು ಉಪಸ್ಥಿತರಿದ್ದರು.