ಮೈಸೂರು: ಬೆಳ್ಳಂಬೆಳಿಗ್ಗೆ ಪೊಲೀಸರು ಮುನ್ನೂರಕ್ಕೂ ಅಧಿಕ ರೌಡಿ ಶೀಟರ್ ಗಳ ಮನೆ ಮೇಲೆ ಅನಿರೀಕ್ಷಿತ ದಾಳಿ ನಡೆಸಿ ಶಾಕ್ ನೀಡಿದರು.
ರೌಡಿ ಶೀಟರ್ ಗಳ ಮನೆಯಲ್ಲಿ ತಪಾಸಣೆ ನಡೆಸಿ ಅವರುಗಳಿಗೆ ಎಚ್ಚರಿಕೆ ನೀಡಿದ್ದಾರೆ.
ವಿಧಾನ ಸಭಾ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವುದರಿಂದ ಹಾಗೂ ಕ್ರಿಸ್ಮಸ್, ಹೊಸ ವರ್ಷಾಚರಣೆ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯಬಾರದೆಂಬ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ.
ಮುಂಜಾಗ್ರತಾ ಕ್ರಮವಾಗಿ ಮಂಗಳವಾರ ನಗರ ಪೊಲೀಸ್ ಆಯುಕ್ತ ಬಿ.ರಮೇಶ್ ಆದೇಶದ ಮೇರೆಗೆ ಡಿಸಿಪಿಗಳಾದ ಪ್ರದೀಪ್ ಗುಂಟಿ, ಗೀತಾ ಪ್ರಸನ್ನ ಹಾಗೂ ಇತರ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಮುಂಜಾನೆ ಮುನ್ನೂರಕ್ಕೂ ಅಧಿಕ ರೌಡಿಶೀಟರ್ ಗಳ ಮನೆಯ ಮೇಲೆ ದಾಳಿ ನಡೆಸಿದರು.
ಈ ವೇಳೆ ಅಪಾರ ಪ್ರಮಾಣದ ಚೆಕ್ ಗಳು, ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ.
ಸಾಂಸ್ಕೃತಿಕ ನಗರಿಯಲ್ಲಿ ಅಪರಾಧ ಕೃತ್ಯಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಈಗಾಗಲೇ ಪೊಲೀಸರು ರೌಡಿ ಶೀಟರ್ ಗಳ ಮನೆಗಳ ಮೇಲೆ ದಾಳಿ ನಡೆಸಿ ಶಸ್ತ್ರಾಸ್ತ್ರ, ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿ ಪೊಲೀಸರು ಎಚ್ಚರಿಕೆಯನ್ನೂ ನೀಡಿದ್ದರು.
ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಅನುಮಾನಾಸ್ಪದ ರೌಡಿ ಶೀಟರ್ ಗಳ ವಿಚಾರಣೆ ನಡೆದಿದೆ.