ಮಡಿಕೇರಿ: ಮೀನು ವ್ಯಾಪಾರಿಯನ್ನು ಹತ್ಯೆ ಮಾಡಿ ತಲೆಮರೆಸಿಕೊಂಡಿದ್ದ ವ್ಯಕ್ತಿಯನ್ನು ಸಿದ್ದಾಪುರ ಪೊಲೀಸರು ಮೈಸೂರಿನಲ್ಲಿ ಬಂಧಿಸಿದ್ದಾರೆ.
ನೌಶಾದ್ ಸಿದ್ದಾಪುರ ಪಾಲಿಬೆಟ್ಟದ ಮೀನು ವ್ಯಾಪಾರಿಯ ಮೇಲೆ ಕಾರು ಹತ್ತಿಸಿ ಹತ್ಯೆ ಮಾಡಿದ ಆರೋಪಿ ಡಿಸೆಂಬರ್ 10 ರಂದು ಮೀನು ವ್ಯಾಪಾರಿಯ ಮೇಲೆ ಕಾರು ಹತ್ತಿಸಿದ್ದರಿಂದ ಗಂಭೀರ ಗಾಯಗೊಂಡು ನಂತರ ಮೃತಪಟ್ಟಿದ್ದರು. ನಂತರ ಆರೋಪಿ ಮೂರ್ನಾಡು ಗ್ರಾಮದ ಮುಖ್ಯ ರಸ್ತೆಯಲ್ಲಿ ಕಾರು ನಿಲ್ಲಿಸಿ ಪರಾರಿಯಾಗಿದ್ದ.
ಈ ಬಗ್ಗೆ ಸಿದ್ದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಆರೋಪಿಯ ಪತ್ತೆಗಾಗಿ ಪೊಲೀಸ್ ವರಿಷ್ಠಾಧಿಕಾರಿ ಕ್ಯಾಪ್ಟನ್ ಅಯ್ಯಪ್ಪ ಪೊಲೀಸ್ ತಂಡವನ್ನು ರಚಿಸಿದ್ದರು.
ಡಿವೈಎಸ್ಪಿ ಗಜೇಂದ್ರ ಪ್ರಸಾದ್ ಮಾರ್ಗದರ್ಶನದಲ್ಲಿ ಸರ್ಕಲ್ ಇನ್ಸ್ ಪೆಕ್ಟರ್ ಶಿವಶಂಕರ್ ನೇತೃತ್ವದಲ್ಲಿ ಸಿದ್ದಾಪುರ ಠಾಣಾಧಿಕಾರಿ ಮೋಹನ್ ರಾಜ್ ಹಾಗೂ ಸಿಬ್ಬಂದಿ ಆರೋಪಿಯನ್ನ ಮೈಸೂರಿನಲ್ಲಿ ಪತ್ತೆ ಹಚ್ಚಿ ನ್ಯಾಯಲಯಕ್ಕೆ ಹಾಜರುಪಡಿಸಿದ್ದಾರೆ.