ಮೊದಲು ಸಾರ್ವಕರ್ ಬಗ್ಗೆ ಕಾಂಗ್ರೆಸ್ ತಿಳಿದುಕೊಳ್ಳಲಿ; ಈಶು ಟಾಂಗ್

ಬಾಗಲಕೋಟೆ: ಬೆಳಗಾವಿ ಸುವರ್ಣಸೌಧದಲ್ಲಿ ವೀರ ಸಾವರ್ಕರ್ ಭಾವಚಿತ್ರ ಹಾಕುವ ವಿಚಾರಕ್ಕೆ ಸಾವರ್ಕರ್​​ ಗೂ ಕರ್ನಾಟಕಕ್ಕೂ ಏನು ಸಂಬಂಧ ಎಂದು ಪ್ರಶ್ನಿಸಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಗೆ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ತಿರುಗೇಟು ನೀಡಿದ್ದಾರೆ.

ಈ ಬಗ್ಗೆ ಮಾಧ್ಯಮ ಪ್ರತನಿಧಿಗಳೊಂದಿಗೆ ಮಾತನಾಡಿದ ಈಶ್ವರಪ್ಪ, ದೇಶಕ್ಕೂ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಗೂ ಏನು ಸಂಬಂಧ  ಎಂದು  ಪ್ರಶ್ನಿಸಿದ್ದಾರೆ.

ಸಾವರ್ಕರ್ ಅವರು ಸ್ವಾತಂತ್ರ್ಯ ಹೋರಾಟದಲ್ಲಿ ಜೈಲು ಸೇರಿದವರು,

ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಜೈಲು ಶಿಕ್ಷೆ ಅನುಭವಿಸಿದ್ದಾರಾ ಡಿ.ಕೆ.ಶಿವಕುಮಾರ್ ಗೆ ತಿಹಾರ್​ ಜೈಲು, ಪರಪ್ಪನ ಅಗ್ರಹಾರ ಜೈಲು ಗೊತ್ತು ಎಂದು ವ್ಯಂಗ್ಯವಾಡಿದರು.

ವೀರ ಸಾವರ್ಕರ್ ಅವರು ಅಂಡಮಾನ್ ​ ಜೈಲಿನಲ್ಲಿ ಹಲವು ವರ್ಷಗಳ ಕಾಲ ಕಠಿಣ ಶಿಕ್ಷೆ ಅನುಭಿವಿಸಿದ್ದರು.

ಮೊದಲು ಕಾಂಗ್ರೆಸ್​ ನಾಯಕರು ವೀರ ಸಾವರ್ಕರ್ ಅವರ ಇತಿಹಾಸ ತಿಳಿದುಕೊಳ್ಳುವ ಪ್ರಯತ್ನ ಮಾಡಲಿ ನಂತರ ಅವರ ಫೋಟೋ ಕುರಿತು ಮಾತನಾಡಲಿ ಎಂದು ಟಾಂಗ್ ನೀಡಿದರು.