ಮೈಸೂರು: ಬೆಳ್ಳಂ ಬೆಳಗ್ಗೆ ಮೈಸೂರಿನಲ್ಲಿ ಡ್ರಗ್ಸ್ ಪೆಡ್ಲರ್ ಗಳಿಗೆ ನಗರ ಪೊಲೀಸ್ ಆಯುಕ್ತ ಬಿ.ರಮೇಶ್ ಚಳಿ ಬಿಡಿಸಿದ್ದಾರೆ.
ಗಾಂಜಾ ವಿರುದ್ದ ಸಮರ ಸಾರಿರುವ ಪೊಲೀಸ್ ಆಯುಕ್ತರು ಧಿಢೀರ್ ದಾಳಿ ನಡೆಸಿ ಡ್ರಗ್ಸ್ ಪೆಡ್ಲರುಗಳಿಗೆ ಬಿಸಿ ಮುಟ್ಟಿಸಿದ್ದಾರೆ.
ಮೈಸೂರು ನಗರದ ವಿವಿದ ಸ್ಥಳಗಳಲ್ಲಿ ಸುಮಾರು 30ಕ್ಕೂ ಹೆಚ್ಚು ಪೆಡ್ಲರ್ ಗಳ ಮನೆ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ.
ಪೊಲೀಸ್ ಆಯುಕ್ತ ಬಿ.ರಮೇಶ್ ನೇತೃತ್ವದಲ್ಲಿ ಡಿಸಿಪಿ ಮುತ್ತುರಾಜ್, 4 ಎಸಿಪಿಗಳು, 20 ಇನ್ಸ್ಪೆಕ್ಟರ್ ಗಳು ಮತ್ತು 100ಕ್ಕೂ ಹೆಚ್ಚು ಸಿಬ್ಬಂದಿ ಬೆಳ್ಳಂ ಬೆಳಿಗ್ಗೆ ಕಾರ್ಯಾಚರಣೆ ನಡೆಸಿದರು.
ದಾಳಿ ವೇಳೆ ಕೆಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಅಕ್ರಮ ಚಟುವಟಿಕೆಯಲ್ಲಿ ಭಾಗಿಯಾಗದಂತೆ ಎಚ್ಚರಿಕೆ ನೀಡಿದ್ದಾರೆ.