ಬೆಂಗಳೂರು: ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಕೆ.ಜೆ.ಜಾರ್ಜ್ ಸೇರಿ ಮೂರು ಮಂದಿಗೆ ಕಾನೂನು ಸಂಕಷ್ಟ ಎದುರಾಗಿದೆ.
ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಬಿ ರಿಪೆÇೀರ್ಟ್ ಸಲ್ಲಿಸಿದ್ದ ಸಿಬಿಐ ವರದಿಯನ್ನು ಜನಪ್ರತಿನಿಗಳ ವಿಶೇಷ ನ್ಯಾಯಾಲಯ ತಿರಸ್ಕರಿಸಿ, ಮರುತನಿಖೆಗೆ ಆದೇಶಿಸಿದೆ.
ನ್ಯಾಯಾಧೀಶರಾದ ತ್ಯಾಜರಾಜ್ ಎನ್. ಇನವಳ್ಳಿ ಅವರು ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಸಿಬಿಐ ಸಲ್ಲಿಸಿದ್ದ ಬಿ ರಿಪೆÇೀರ್ಟ್ ಅನ್ನು ತಿರಸ್ಕರಿಸಿದ್ದಾರೆ.
ಮಾಜಿ ಸಚಿವ ಹಾಗೂ ಕಾಂಗ್ರೆಸ್ ಶಾಸಕ ಕೆ.ಜೆ ಜಾರ್ಜ್, ಐಪಿಎಸ್ ಅಧಿಕಾರಿಗಳಾದ ಪ್ರಣವ್ ಮೊಹಂತಿ ಮತ್ತು ಎ.ಎಂ ಪ್ರಸಾದ್ ಅವರಿಗೆ ಕೋರ್ಟ್ ನೋಟೀಸ್ ನೀಡಿ, ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.
ಸಿಬಿಐ ಈ ಪ್ರಕರಣದ ತನಿಖೆ ನಡೆಸಿ ಬಿ ರಿಪೆÇೀರ್ಟ್ ಸಲ್ಲಿಸಿತ್ತು. ಇದನ್ನು ಪ್ರಶ್ನಿಸಿ ಗಣಪತಿ ಅವರ ಪುತ್ರ ನೆಹಾಲ್ ಗಣಪತಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು.
ಈ ಪ್ರಕರಣದ ವಾದ- ಪ್ರತಿವಾದ ಆಲಿಸಿದ ನ್ಯಾಯಾಧೀಶರು ಸಿಬಿಐ ಸಲ್ಲಿಸಿದ್ದ ಬಿ ರಿಪೆÇೀರ್ಟ್ ಅನ್ನು ತಿರಸ್ಕರಿಸಿದ್ದಾರೆ.
ಈ ಪ್ರಕರಣದ ವಿಚಾರಣೆಯನ್ನು ಸೆ. 28ಕ್ಕೆ ಮುಂದೂಡಲಾಗಿದೆ.
ಕೆ.ಜೆ.ಜಾರ್ಜ್, ಪ್ರಣಬ್ ಮೊಹಂತಿ ಹಾಗೂ ಎ.ಎಂ.ಪ್ರಸಾದ್ ಅವರುಗಳಿಗೆ ವಿಚಾರಣೆಗೆ ಹಾಜರಾಗಬೇಕೆಂದು ಸಮನ್ಸ್ ಜಾರಿ ಮಾಡಲಾಗಿದೆ.