ಮೈಸೂರು: ಇಬ್ಬರು ಸರಗಳ್ಳರನ್ನು ಬಂಧಿಸುವಲ್ಲಿ ಸರಸ್ವತಿಪುರಂ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಗಳಿಂದ 13 ಲಕ್ಷ ಮೌಲ್ಯದ 220 ಗ್ರಾಂ ತೂಕದ ಚಿನ್ನದ ಸರಗಳು ಹಾಗೂ ಕೃತ್ಯಕ್ಕೆ ಬಳಸಿದ ಎರಡು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ
ಇವರಿಬ್ಬರ ಬಂಧನದಿಂದ ಮೈಸೂರು ನಗರದ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ 7 ಸರಗಳವು ಪ್ರಕರಣಗಳು ಪತ್ತೆಯಾಗಿದೆ.
ಸರಸ್ವತಿ ಪುರಂ ಠಾಣೆಯ 3, ವಿಜಯನಗರ ಠಾಣೆಯ 2, ವಿದ್ಯಾರಣ್ಯಪುರಂ ಠಾಣೆಯ 1, ಹೆಬ್ಬಾಳ್ ಪೊಲೀಸ್ ಠಾಣೆಯ 1 ಸರಗಳವು ಪ್ರಕರಣಗಳು ಪತ್ತೆಯಾಗಿದೆ.
ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ಎಸ್.ಜಾಹ್ನವಿರವರ ಮಾರ್ಗದರ್ಶನದಲ್ಲಿ ಕೆ.ಆರ್.ವಿಭಾಗದ ಎಸಿಪಿ ಗಂಗಾಧರಸ್ವಾಮಿ ಉಸ್ತುವಾರಿಯಲ್ಲಿ ಸರಸ್ವತಿಪುರಂ ಠಾಣೆಯ ಇನ್ಸ್ಪೆಕ್ಟರ್ ಗೋವಿಂದರಾಜು, ಎಎಸ್ ಐಗಳಾದ ರಮೇಶ್, ಚೌಡಪ್ಪ ಸಿಬ್ಬಂದಿಗಳಾದ ಮೋಹನ್ ಕುಮಾರ್, ರಾಘವೇಂದ್ರ, ಉಮೇಶ್, ಹರೀಶ ಕುಮಾರ್, ಕುಮಾರ್, ಮಂಜುನಾಥ್ ಹಾಗೂ ಸಾಗರ್ ರವರು ಕಾರ್ಯಾಚರಣೆ ಪಾಲೊಂಡಿದ್ದರು.