ಬೆಂಗಳೂರಿನಲ್ಲಿ ಶಂಕಿತ ಉಗ್ರ ಅರೆಸ್ಟ್

ಬೆಂಗಳೂರು: ಬೆಂಗಳೂರಿನಲ್ಲಿ ಶಂಕಿತ ಉಗ್ರನನ್ನ ಬಂಧಿಸಲಾಗಿದೆ.

ಥಣಿಸಂದ್ರದ ಮಂಜುನಾಥ ನಗರದಲ್ಲಿ ಐಎಸ್ ಡಿ ಮತ್ತು ಕೇಂದ್ರ ತನಿಖಾ ಸಂಸ್ಥೆಗಳು ಕಾರ್ಯಾಚರಣೆ ನಡೆಸಿ ಶಂಕಿತ ಉಗ್ರ ಆರೀಫ್  ಎಂಬಾತನನ್ನು ಬಂಧಿಸಿವೆ.

ಶಂಕಿತ ಉಗ್ರ ಆರೀಫ್  ಕಳೆದ 2 ವರ್ಷಗಳಿಂದ ಅಲ್ಖೈದಾ ಜೊತೆ ಸಂಪರ್ಕದಲ್ಲಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಖಾಸಗಿ ಸಾಫ್ಟ್ವೇರ್ ಕಂಪನಿಯಲ್ಲಿ ವರ್ಕ್ ಫರ್ಮ್ ಹೋಮ್ ಮೂಲಕ ಮನೆಯಲ್ಲೆ ಕೆಲಸ ಮಾಡುತಿದ್ದ ಆರೀಫ್ಗೆ ಉಗ್ರ ಸಂಘಟನೆಗಳಲ್ಲಿ ಸೇರಿಕೊಳ್ಳಬೇಕು ಎಂಬ ಕನಸಿತ್ತಂತೆ

ಅದರಂತೆ ಸಾಮಾಜಿಕ ಜಾಲತಾಣಗಳು, ವೆಬ್ ಸೈಟ್ ಮೂಲಕ ಉಗ್ರ ಸಂಘಟನೆಗಳನ್ನು ಸೇರಲು ತಯಾರಿ ನಡೆಸಿದ್ದ ಎಂದು ಗೊತ್ತಾಗಿದೆ.