ಮಹಿಳಾ‌ ಕಾನ್ಸ್ಟೆಬಲ್ ಆತ್ಮಹತ್ಯೆ

ಮೈಸೂರು: ಮಹಿಳಾ ಪೇದೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನ ಕೆ.ಎಸ್.ಆರ್.ಪಿ.ಕ್ವಾರ್ಟರ್ಸ್ ನಲ್ಲಿ ನಡೆದಿದೆ.

ಗೀತಾ(32)ಆತ್ಮಹತ್ಯೆ ಮಾಡಿಕೊಂಡಿರುವ ಕಾನ್ಸ್ಟೆಬಲ್.

ನಜರಬಾದ್ ಪೊಲೀಸ್ ಠಾಣೆಯಲ್ಲಿ ಆಕೆ ಕರ್ತವ್ಯ ನಿರ್ವಹಿಸುತ್ತಿದ್ದರು.ಸೋಮವಾರ ಕರ್ತವ್ಯಕ್ಕೆ ಹಾಜರಾಗಿ,ಸುಮಾರು 12 ಗಂಟೆ ವೇಳೆಗೆ ಅನಾರೋಗ್ಯದ ಕಾರಣ ನೀಡಿ ಕ್ವಾರ್ಟರ್ಸ್ ಗೆ ತೆರಳಿದ್ದಾರೆ.

ಪತಿಯನ್ನ ಎಟಿಎಂ ನಲ್ಲಿ ಹಣ ಡ್ರಾ ಮಾಡಿಕೊಂಡು ಬರುವಂತೆ ಕಳುಹಿಸಿ ಇತ್ತ ಗೀತಾ ಆತ್ಮಹತ್ಯೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕೊಂಡಿದ್ದಾರೆ.

OTP ಗಾಗಿ ಪತಿ ಕರೆ ಮಾಡಿದಾಗ ಗೀತಾ ಉತ್ತರಿಸಿಲ್ಲ.ತಕ್ಷಣ ಮನೆಗೆ ಬಂದು ನೋಡಿದಾಗ ಗೀತಾ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ.

ನಂತರ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.

ನಜರಬಾದ್ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.