ಬೆಳಗಾವಿ: ಸದ್ಯಕ್ಕೆ ಬಾರ್ ಮತ್ತು ರೆಸ್ಟೋರೆಂಟ್ ತೆರೆಯುವ ಬಗ್ಗೆ ಯಾವುದೇ ನಿರ್ಣಯ ಕೈಗೊಂಡಿಲ್ಲ ಎಂದು ಅಬಕಾರಿ ಸಚಿವ ಎಚ್. ನಾಗೇಶ ಅವರು ತಿಳಿಸಿದರು.
ಸುವರ್ಣ ವಿಧಾನಸೌಧದಲ್ಲಿ ಶನಿವಾರ ಅಬಕಾರಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ನಂತರ ಸಚಿವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ಬಾರ್ ಮತ್ತು ರೆಸ್ಟೋರೆಂಟ್ ತೆರೆಯುವುದರಿಂದ ಸರ್ಕಾರಕ್ಕೆ ಆದಾಯ ಬರಬಹುದು ಆದರೆ ಕೋವಿಡ್-19 ಹಿನ್ನೆಲೆಯಲ್ಲಿ ಬಾರ್ ಮತ್ತು ರೆಸ್ಟೋರೆಂಟ್ ತೆರೆಯಲು ಅನುಮತಿ ನೀಡಿಲ್ಲ ಎಂದರು.
ಲಾಕ್ ಡೌನ್ ಹಿನ್ನೆಲೆಯಲ್ಲಿ ಅಬಕಾರಿ ಇಲಾಖೆಗೆ 3 ಸಾವಿರ ಕೋಟಿ ಇಲಾಖೆಗೆ ನಷ್ಟವಾಗಿದೆ ಎಂದು ಅವರು ತಿಳಿಸಿ ಲಾಕ್ ಡೌನ್ ನಿಂದ ಅಬಕಾರಿ ಇಲಾಖೆಗೆ ಶೇ. 50 ಆದಾಯ ಕಡಿಮೆ ಆಗಿದೆ ಎಂದು ಸಚಿವರು ಹೇಳಿದರು.
ಬಾರ್ ಮತ್ತು ರೆಸ್ಟೋರೆಂಟ್ ತೆರೆದ ಬಳಿಕ ಅಬಕಾರಿ ಇಲಾಖೆಯ ಅದಾಯ ಹೆಚ್ಚಲಿದೆ ಎಂದು ಸಚಿವರು ತಿಳಿಸಿದರು.
ಬೆಳಗಾವಿ ಜಿಲ್ಲೆಗೆ ಗೋವಾದಿಂದ ಅನಧಿಕೃತ ಮದ್ಯ ಸಾಗಿಸಲಾಗುತ್ತಿದೆ. ಇದನ್ನು ತಡೆಯಲು ಬೆಳಗಾವಿ ಮತ್ತು ಗೋವಾ ಗಡಿಯಲ್ಲಿ ರಾತ್ರಿ ವೇಳೆ ಹೆಚ್ಚು ನಿಗಾ ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಅವರು ಹೇಳಿದರು.
ಕಳ್ಳ ಭಟ್ಟಿ ಮಾಡುವರಿಗೆ ಹೆಚ್ಚಿನ ದಂಡ ಹಾಗೂ ಕಠಿಣ ಶಿಕ್ಷೆ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಅಬಕಾರಿ ಇಲಾಖೆಯ ಸಿಬ್ಬಂದಿಗಳ ರಕ್ಷಣೆಗಾಗಿ ಪೆÇಲೀಸ್ ಇಲಾಖೆ ರೀತಿಯಲ್ಲಿ ಶಸ್ತ್ರಾಸ್ತ್ರ ನೀಡುವ ಬಗ್ಗೆ ಚರ್ಚಿಸಲಾಗುವುದು ಎಂದು ಅವರು ಹೇಳಿದರು.
ಅಬಕಾರಿ ಇಲಾಖೆಯಲ್ಲಿ ರಾಜ್ಯಮಟ್ಟದ ಸಹಾಯವಾಣಿ (1800425255) ಆರಂಭಿಸಲಾಗುವುದು ಎಂದು ಸಚಿವರು ತಿಳಿಸಿದರು.