ಸರ್ಕಾರಿ ನೌಕರರಿಗೆ ಮೂಲ ವೇತನದ ಶೇ. 17ರಷ್ಟು ಮಧ್ಯಂತರ ಪರಿಹಾರ ಮಂಜೂರು; ಮುಷ್ಕರ ವಾಪಸ್

ಬೆಂಗಳೂರು: 7ನೇ ವೇತನ ಆಯೋಗ ಜಾರಿಗೆ ಪಟ್ಟು ಹಿಡಿದು ಮುಷ್ಕರ ನಡೆಸುತ್ತಿರುವ ರಾಜ್ಯ ಸರ್ಕಾರಿ ನೌಕರರಿಗೆ  ಸಿಹಿ ಸುದ್ದಿ ಸಿಕ್ಕಿದೆ.

ರಾಜ್ಯ ಸರ್ಕಾರಿ ನೌಕರರಿಗೆ ಮೂಲ ವೇತನದ ಶೇ.17 ರಷ್ಟು ಮಧ್ಯಂತರ ಪರಿಹಾರ ಮಂಜೂರು ಮಾಡಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. 

ಈ ಆದೇಶ ಏಪ್ರಿಲ್ 1,2023ರಿಂದ ಅನ್ವಯವಾಗಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಸರ್ಕಾರದ ಆದೇಶದಲ್ಲಿ 2018ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರಿಗೆ ಮಧ್ಯಂತರ ಪರಿಹಾರವನ್ನು ಮಂಜೂರು ಮಾಡಲು ತೀರ್ಮಾನಿಸಲಾಗಿದೆ.

1ನೇ ಏಪ್ರಿಲ್ 2023ರಿಂದ ಜಾರಿಗೆ ಬರುವಂತೆ ಮೂಲ ವೇತನದ ಶೇಕಡಾ 17ರಷ್ಟು ಮಧ್ಯಂತರ ಪರಿಹಾರವನ್ನು ಮಂಜೂರು ಮಾಡಲಾಗಿದೆ.

ರಾಜ್ಯ ಸರ್ಕಾರಿ ನೌಕರರಿಗೆ ಶೇ.17ರಷ್ಟು ವೇತನ ಹೆಚ್ಚಳ ಮಾಡಿ ಹಣಕಾಸು ಇಲಾಖೆಯಿಂದ ಅಧಿಕೃತ ಆದೇಶ ಪ್ರಕಟಿಸಲಾಗಿದೆ.

ಇದರ ಅನ್ವಯ ಸರ್ಕಾರಿ ನೌಕರರು, ಸ್ಥಳೀಯ ಸಂಸ್ಥೆ ನೌಕರರು, ಅನುದಾನಿತ ಶಿಕ್ಷಣ ಸಂಸ್ಥೆ, ವಿವಿ ಬೋಧಕೇತರ ಸಿಬ್ಬಂದಿ, ಬೋಧಕೇತರ ಸಿಬ್ಬಂದಿಗೆ ಮಧ್ಯಂತರ ಪರಿಹಾರ ಸಿಗಲಿದೆ.

ಏಪ್ರಿಲ್‌ 1ರಿಂದ ಜಾರಿಗೆ ಬರುವಂತೆ ಸರ್ಕಾರ ಈ ಅಧಿಕೃತ ಆದೇಶ ಹೊರಡಿಸಿದೆ.

ಮೂಲವೇತನವೆಂದರೆ ಸ್ಥಗಿತ ವೇತನ ಬಡ್ತಿ, ವೈಯಕ್ತಿಕ ವೇತನ ಜೊತೆಗೆ ಹೆಚ್ಚುವರಿ ವೇತನ ಬಡ್ತಿ ಸೇರಿರುತ್ತದೆ. 7ನೆ ವೇತನ ಆಯೋಗ ಜಾರಿಗೆ ಪಟ್ಟು ಹಿಡಿದಿರುವ ಸರ್ಕಾರಿ ನೌಕರರು ಮುಷ್ಕರ ಕೈಬಿಟ್ಟು ಸೇವೆಗೆ ಇಂದಿನಿಂದಲೇ ವಾಪಸ್ ಆಗುತ್ತಾರೆ ಎಂದು ಸಂಘದ ಅಧ್ಯಕ್ಷ ಷಡಕ್ಷರಿ ತಿಳಿಸಿದ್ದಾರೆ.