500 ರೂ. ಕೊಟ್ಟು ಜನ ಕರೆತನ್ನಿ; ಸಿದ್ಧರಾಮಯ್ಯ ಹೇಳಿಕೆಗೆ ಬಿಜೆಪಿ ವ್ಯಂಗ್ಯ

ಬೆಳಗಾವಿ: ವಿಧಾನ ಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಪಕ್ಷಗಳ  ಪ್ರಚಾರ ಕಾರ್ಯ ಬಿರುಸುಗೊಂಡಿದ್ದು ಮತದಾರರ ಸೆಳೆಯಲು ನಾನಾ ಕಸರತ್ತು ನಡೆಸುತ್ತಿವೆ.

ಇದರ ನಡುವೆ ಯಾತ್ರೆಗಳ ಮೂಲಕವೂ ಮತದಾರರನ್ನು ಸೆಳೆಯಲು ಮುಂದಾಗಿವೆ.

ಅದಕ್ಕಾಗಿ ಹೇರಳವಾಗಿ ಹಣ ವೆಚ್ಚ ಮಾಡುತ್ತಿವೆ.ಇದರ ಮಧ್ಯೆ ಜನರಿಗೆ 500 ರೂ. ಕೊಟ್ಟು ಪ್ರಚಾರಕ್ಕೆ ಕರೆದುಕೊಂಡು ಬನ್ನಿ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆನ್ನಲಾದ ವಿಡಿಯೋ ಈಗ ವೈರಲ್ ಆಗಿಬಿಟ್ಟಿದೆ

ಈ ಸಂಬಂಧ ಟ್ವಿಟ್ ಮಾಡಿ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ರಾಜ್ಯ ಬಿಜೆಪಿ ಘಟಕ,  ದುಡ್ಡು ಕೊಟ್ಟು ಜನರನ್ನು ಕರೆದು ತರುವುದು, ಅವರಿಗೆಲ್ಲ ಬಿಟ್ಟಿ ಭಾಗ್ಯ ಘೋಷಣೆ ಮಾಡುವುದು, ಆ ಕಡೆ ಅದೂ ಇಲ್ಲ, ಈ ಕಡೆ ಇದೂ ಇಲ್ಲ ಎಂದು ಗೇಲಿ ಮಾಡಿದೆ.

ಕಾಂಗ್ರೆಸ್ ಕಥೆ ಈಗ ಮುಂಡಾಸು ಇಲ್ಲದಿರುವ ಮದುಮಗನ ಥರ ಆಗಿದೆ ಎಂದು ಟಾಂಗ್ ನೀಡಿದೆ.

ಬುಧವಾರ ಬೆಳಗಾವಿ ಜಿಲ್ಲೆಯಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ಪ್ರಜಾಧ್ವನಿ ಯಾತ್ರೆ ನಡೆಯಿತು,ಈ ವೇಳೆ ಕಾರ್ಯಕ್ರಮಕ್ಕೆ ಜನರನ್ನು ಕರೆದುಕೊಂಡು ಬರುವ ಬಗ್ಗೆ ಸಿದ್ದರಾಮಯ್ಯ ಮಾತನಾಡುವಾಗ ಈ ಹೇಳಿಕೆ ನೀಡಿದ್ದಾರೆ.