ಮಾಡಾಳ್ ವಿರೂಪಾಕ್ಷಪ್ಪ ಬಂಧನ ಸನ್ನಿಹಿತ

ಕಲಬುರಗಿ: ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಬಂಧನ ಮಂಗಳವಾರದೊಳಗೆ ಆಗಲಿದೆ ಎಂದು ಮಾಜಿ ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

ಕಲಬುರಗಿಯಲ್ಲಿ ಸೋಮವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು,ತಪ್ಪು ಮಾಡಿದವರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.

ಸರ್ಕಾರ ತಪ್ಪಿತಸ್ಥ ಯಾರನ್ನೂ ರಕ್ಷಣೆ ಮಾಡುವುದಿಲ್ಲ ಎಂದು ಪ್ರಶ್ನೆಯೊಂದಕ್ಕೆ‌ ಉತ್ತರಿಸಿದರು.

ಮಾಡಾಳ್ ಉಚ್ಛಾಟನೆ ಕುರಿತು ಪಕ್ಷದ ಹೈಕಮಾಂಡ್ ಗೆ ತಿಳಿಸಲಾಗಿದೆ ಈ ಬಗ್ಗೆ ಅವರೇ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ಯಡಿಯೂರಪ್ಪ ತಿಳಿಸಿದರು.