ಹಾಸನ: ವೃದ್ಧ ದಂಪತಿಯ ಕೊಲೆ ನಡೆದಿದೆ.
ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಆಲಗೊಂಡನಹಳ್ಳಿಯಲ್ಲಿ ಈ ದುರ್ಘಟನೆ ನಡೆದಿದೆ.
ಕೊಲೆಗೀಡಾದವರು ಮುರುಳೀಧರ್ (71), ಉಮಾದೇವಿ (67).
ಇವರಿಬ್ಬರನ್ನು ದಿಂಬಿನಿಂದ ಉಸಿರುಗಟ್ಟಿಸಿ ಅವರ ತೋಟದ ಮನೆಯಲ್ಲಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
80 ಎಕರೆ ಜಮೀನು ಹೊಂದಿದ್ದ ಮುರುಳೀಧರ್ ದಂಪತಿಗೆ ಮಕ್ಕಳಿರಲಿಲ್ಲ.
ಮೃತ ಮುರುಳೀಧರ್ ತಂದೆ ಕೃಷ್ಣಮೂರ್ತಿ ಸ್ವಾತಂತ್ರ್ಯ ಹೋರಾಟಗಾರರಾಗಿದ್ದರು. ಸರ್ಕಾರ ಅವರಿಗೆ 80 ಎಕರೆ ಜಮೀನು ನೀಡಿತ್ತು.
ಕೃಷಿಯಲ್ಲಿ ಆಸಕ್ತಿ ಹೊಂದಿದ್ದ ಮುರುಳೀಧರ್ ಜಮೀನಿನಲ್ಲಿ ಮನೆ ಕಟ್ಟಿಕೊಂಡು ವಾಸವಿದ್ದರು. ಇವರಿಬ್ಬರ ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಚನ್ನರಾಯಪಟ್ಟಣ ಗ್ರಾಮಾಂತರ ಠಾಣೆ ಪೆÇಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆ ಬಲೆ ಬೀಸಿದ್ದಾರೆ.