ಬೆಳಗಾವಿ: ಉರಿಗೌಡ, ನಂಜೇಗೌಡ ಸಿನಿಮಾ ನಿರ್ಮಾಣಕ್ಕೆ ಮುಂದಾಗಿರುವ ಬಿಜೆಪಿಯವರ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.
ಬೆಳಗಾವಿಯಲ್ಲಿ ಸೋಮವಾ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು
ಬಿಜೆಪಿಯವರು ಇತಿಹಾಸ ಬದಲಾವಣೆ ಮಾಡಲು ಹೊರಟಿದ್ದಾರೆ. ಇತಿಹಾಸವನ್ನ ತಿರುಚಿದ್ದಾರೆ ಎಂದು ಕಿಡಿಕಾರಿದರು.
ವಾಟ್ಸಪ್ ಯುನಿವರ್ಸಿಟಿ ಮೂಲಕ ಹೊಸ ಇತಿಹಾಸ ಬರೆಯಲು ಯತ್ನಿಸಿದ್ದಾರೆ. ಒಕ್ಕಲಿಗರಿಗೆ ಅಗೌರವ ತೋರುವ ಕೆಲಸ ಮಾಡುತ್ತಿದ್ದಾರೆ.
ಉರಿಗೌಡ, ದೊಡ್ಡ ನಂಜೇಗೌಡರ ಹೆಸರನ್ನ ಎಲ್ಲಿ ಕೇಳಿದ್ದೇವೆ. ಕೂಡಲೇ ಈ ಬಗ್ಗೆ ಪ್ರಸ್ತಾಪಿಸಿದವರ ವಿರುದ್ದ ಕೇಸ್ ದಾಖಲಿಸಬೇಕು ಎಂದು ಡಿಕೆಶಿ ಒತ್ತಾಯಿಸಿದರು.
ಶೋಭಾ ಕರಂಧ್ಲಾಜೆ, ಸಿಟಿ ರವಿ ಒಕ್ಕಲಿಗ ಸಮುದಾಯದ ವಿರೋಧಿಗಳು. ಸಿಎಂ ಬಸವರಾಜ ಬೊಮ್ಮಾಯಿ ನಮ್ಮ ಗ್ಯಾರಂಟಿ ಬಗ್ಗೆ ಟೀಕೆ ಮಾಡುತ್ತಾರೆ, ಮಾಡಲಿ ಪರವಾಗಿಲ್ಲ. ಬಿಜೆಪಿಯವರು ನಮ್ಮನ್ನ ಫಾಲೋ ಮಾಡುತ್ತಿದ್ದಾರೆ ಎಂದು ಹೇಳಿದರು