ಯುವಕನ ಹತ್ಯೆಗೈದ ದುಷ್ಕರ್ಮಿಗಳು

ಮೈಸೂರು: ಹಳೆ ವೈಷಮ್ಯದ ಹಿನ್ನೆಲೆಯಲ್ಲಿ  ಯುವಕನೊಬ್ಬನನ್ನು ದುಷ್ಕರ್ಮಿಗಳು ಹತ್ಯೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ.

ಮೃತ ಯುವಕನನ್ನು ಕಾಕವಾಡಿ ವಾಸಿ ಶ್ರೀಗಂಧ(೨೪) ಎಂದು ಗುರುತಿಸಲಾಗಿದೆ.

ಭಾನುವಾರ ರಾತ್ರಿ ಮೈಸೂರಿನ ಚಾಮರಾಜ ನೂರಡಿ ರಸ್ತೆಯಲ್ಲಿ ಶ್ರೀಗಂಧ ಹೋಗುತ್ತಿದ್ದಾಗ ರವಿ ಎಂಬಾತ ತನ್ನ ಸ್ನೇಹಿತರೊಂದಿಗೆ ಸೇರಿ ಆತನ ಮೇಲೆ ಹಲ್ಲೆ ನಡೆಸಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ.

ಶ್ರೀಗಂಧನ ಮೇಲಿದ್ದ ಹಳೆಯ ವೈಷಮ್ಯವೇ ಕೊಲೆಗೆ ಕಾರಣ ಎಂದು ತಿಳಿದು ಬಂದಿದೆ.

ರಕ್ತದ ಮಡುವಿನಲ್ಲಿ ಬಿದ್ದಿದ್ದ ಶ್ರೀಗಂಧನನ್ನು ಆತನ ಸ್ನೇಹಿತರು ಆಸ್ಪತ್ರೆಗೆ ಸೇರಿಸಿದ್ದರು. ಆದರೆ ಚಿಕಿತ್ಸೆ ಫಲಿಸದೇ ಶ್ರೀಗಂಧ ಸಾವನ್ನಪ್ಪಿದ್ದಾನೆ.ಕೆ.ಆರ್.ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.