ಚಿಕ್ಕಮಗಳೂರು: ದಾಖಲೆ ಇಲ್ಲದೆ ಪಿಕಪ್ ವಾಹನನಲ್ಲಿ ಸಾಗಿಸುತ್ತಿದ್ದ 9 ಕೆ.ಜಿ. 300 ಗ್ರಾಂ ಚಿನ್ನವವನ್ನ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಚಿಕ್ಕಮಗಳೂರಿನ ತರೀಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಚಿನ್ನ ವಶಪಡಿಸಿಕೊಳ್ಳಲಾಗಿದೆ.
ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಗಡಿಗಳಲ್ಲಿ ಚೆಕ್ ಪೋಸ್ಟ್‌ಗಳನ್ನು ನಿರ್ಮಿಸಲಾಗಿದೆ.
ತರೀಕೆರೆ ಪಟ್ಟಣದ ಚೆಕ್ ಪೋಸ್ಟ್ ಬಳಿ ತಪಾಸಣೆ ನಡೆಸಿದಾಗ ಇಬ್ಬರು ವ್ಯಕ್ತಿಗಳು ಪಿಕಪ್ ವಾಹನದಲ್ಲಿ ನಾಲ್ಕು ಬಾಕ್ಸ್ ಚಿನ್ನ ಅಕ್ರಮ ಸಾಗಾಟ ಮಾಡುತ್ತಿರುವುದು ಕಂಡುಬಂದಿದೆ.
ಬಾಕ್ಸ್ನಲ್ಲಿ ಚಿನ್ನದ ಸರಗಳು ಹಾಗೂ ಚಿನ್ನದ ಬಿಸ್ಕೆಟ್ ಪತ್ತೆಯಾಗಿದೆ.
ಚಿಕ್ಕಮಗಳೂರು ಎಸ್ಪಿ ಉಮಾ ಪ್ರಶಾಂತ್ ನೇತೃತ್ವದಲ್ಲಿ ಕಾರ್ಯಚರಣೆ ನಡೆಸಿ 2 ಕೋಟಿ 30 ಲಕ್ಷ ರೂ. ಬೆಲೆ ಬಾಳುವ 9 ಕೆ.ಜಿ. 300 ಗ್ರಾಂ ಚಿನ್ನ ವಶಪಡಿಸಿಕೊಳ್ಳಲಾಗಿದೆ.
ಪಿಕಪ್ ವಾಹನ ಸವಾರ ಹಾಗೂ ಮತ್ತೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.