ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಕೊರೊನಾ ಸೋಂಕು ತಗುಲಿದೆ.
ಈ ಬಗ್ಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಅವರು ಟ್ವೀಟ್ ಮಾಡಿದ್ದಾರೆ.
ಪಕ್ಷದ ರಾಜ್ಯಾಧ್ಯಕ್ಷರು, ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ನಳಿನ್ ಕುಮಾರ ಕಟೀಲ್ ಅವರಿಗೆ ಕೊರೊನಾ ಸೋಂಕು ಧೃಢಪಟ್ಟಿರುವುದು ಬೇಸರ ತಂದಿದೆ. ಅವರು ಶೀಘ್ರವಾಗಿ ಗುಣಮುಖರಾಗಿ ಎಂದಿನಂತೆ ಕಾರ್ಯೋನ್ಮುಖರಾಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ನಲ್ಲಿ ಬರೆದಿದ್ದಾರೆ.