ಏ. ​11ರ ವರೆಗೆ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ

ಬೆಂಗಳೂರು: ರಾಜ್ಯ ವಿಧಾನ ಸಭಾ ಚುನಾವಣೆಗೆ ದಿನಾಂಕ ಪ್ರಕಟವಾಗುತ್ತಿದ್ದಂತೆ ಏಪ್ರಿಲ್ 11ರವರೆಗೆ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಅವಕಾಶ ನೀಡಲಾಗಿದೆ ಎಂದು ರಾಜ್ಯ ಮುಖ್ಯಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ  ಮನೋಜ್ ಕುಮಾರ್ ಮೀನ ಅವರು, ಏಪ್ರಿಲ್ 11ರವರೆಗೆ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಅವಕಾಶ ನೀಡಲಾಗಿದೆ, ಪಟ್ಟಿಯಲ್ಲಿ ಹೆಸರು ಇಲ್ಲದವರು ಕೂಡಲೆ ಹೆಸರು ಸೇರ್ಪಡೆ ಮಾಡಿಕೊಳ್ಳಿ ಎಂದು ಸಲಹೆ ನೀಡಿದರು.

ವಿಶೇಷ ವಿಕಲಚೇತನರು ಮನೆಯಿಂದಲೇ ಮತದಾನ ಮಾಡಬಹುದು. ಮನೆಯಿಂದ ಮತ ಹಾಕುವವರಿಗೆ ಫಾರಂ 12ರಡಿ ಅನುಮತಿ ನೀಡಲಾಗುತ್ತದೆ ವಿಕಲಚೇತನರು ಇರುವ ಮನೆಗೆ ಚುನಾವಣಾ ಸಿಬ್ಬಂದಿ ತೆರಳಲಿದ್ದಾರೆ.

ನಮ್ಮ ಸಿಬ್ಬಂದಿ ಜತೆ ಪಕ್ಷಗಳ ಪ್ರತಿನಿಧಿಗಳು ಕೂಡ ಹೋಗುತ್ತಾರೆ. ವಿಕಲಚೇತನರ ಮತದಾನದ ವೇಳೆ ಗೌಪ್ಯತೆ ಕಾಪಾಡಲಾಗುತ್ತದೆ ಎಂದು ಹೇಳಿದರು.

ಬಾರಿ ರಾಜ್ಯ ಮತದಾರರ ಪಟ್ಟಿಗೆ 3,021 NRIಗಳ ಹೆಸರು ಸೇರ್ಪಡೆಯಾಗಿವೆ,

ರಾಜ್ಯದಲ್ಲಿ ಒಟ್ಟು 58282 ಮತಗಟ್ಟೆಗಳಿವೆ. ಕೋವಿಡ್ ಬಾಧಿತರಿಗೆ ಪ್ರತ್ಯೇಕ ಮತಗಟ್ಟೆ ಇರಲಿದೆ. 80 ವರ್ಷ ಮೇಲ್ಪಟ್ಟವರು, ದಿವ್ಯಾಂಗರಿಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ ಎಂದು ವಿವರಿಸಿದರು.

ಮತಗಟ್ಟೆಗಳಲ್ಲಿ ಕೋವಿಡ್ ಮಾರ್ಗಸೂಚಿ ಕಡ್ಡಾಯ. ಇವಿಎಂ ಬ್ಯಾಲೆಟ್ ಪೇಪರ್ ನಲ್ಲಿ ಅಭ್ಯರ್ಥಿಗಳ ಭಾವಚಿತ್ರವಿರಲಿದೆ. ನೋಟಾ ಆಯ್ಕೆಯ ವ್ಯವಸ್ಥೆ ಕೂಡಾ ಇದೆ ಎಂದು ಮನೋಜ್ ಕುಮಾರ್ ಮೀನ ತಿಳಿಸಿದರು.