ಮೈಸೂರು: ಶ್ರೀ ಶಿವಕುಮಾರಸ್ವಾಮೀಜಿ ಯವರು ಸೂರ್ಯನಂತೆ ಎಲ್ಲರ ಮನೆ, ಮನ ಬೆಳಗುವ ಮಹಾನ್ ಚೇತನ,ಅವರು ನಮ್ಮೊಂದಿಗೆ ಇಂದಿಗೂ ಇದ್ದಾರೆ, ಮುಂದೆಯೂ ಇರುತ್ತಾರೆ ಎಂದು ಕಾಂಗ್ರೆಸ್ ಮುಖಂಡ ಎನ್. ಎಂ. ನವೀನ್ ಕುಮಾರ್ ಹೇಳಿದರು.
ಶಿವಕುಮಾರಸ್ವಾಮೀಜಿ ಅವರ ಜನ್ಮದಿನಾಚರಣೆ ಮಾಡುವುದರೊಂದಿಗೆ ಅವರ ದಾರಿಯಲ್ಲಿ ಸಾಗಿದರೆ ಮಾತ್ರ ಆಚರಣೆ ಸಾರ್ಥಕವಾಗುತ್ತದೆ ಎಂದು ಹೇಳಿದರು.
ಮೈಸೂರಿನ ನಂಜುಮಳಿಗೆ ವೃತ್ತದಲ್ಲಿ ಕೃಷ್ಣರಾಜ ಯುವ ಬಳಗದ ವತಿಯಿಂದ ಏರ್ಪಡಿಸಿದ್ದ ಶ್ರೀ ಸಿದ್ಧಗಂಗಾ ಶ್ರೀ ಶಿವಕುಮಾರ ಸ್ವಾಮಿಗಳ 116 ನೇ ವರ್ಷದ ಜನ್ಮ ದಿನಾಚರಣೆ ಅಂಗವಾಗಿ ಗೋಪೂಜೆ ಹಾಗೂ ಗೋವುಗಳಿಗೆ ಮೇವು ವಿತರಿಸಿ ಮಾತನಾಡಿದ ಅವರು ಮಾತನಾಡಿದರು.
ತ್ರಿವಿಧ ದಾಸೋಹಿಗಳಾದ ಡಾ.ಶಿವಕುಮಾರ ಸ್ವಾಮೀಜಿ ಅವರು ಭೌತಿಕವಾಗಿ ನಮ್ಮೊಂದಿಗೆ ಇಲ್ಲದೇ ಇದ್ದರೂ ಮಾನಸಿಕವಾಗಿ ನಮ್ಮೊಂದಿಗೆ ಇದ್ದಾರೆ. ಇಷ್ಟಲಿಂಗ ಪೂಜೆಯನ್ನು ಜಗತ್ತಿಗೆ ತೋರಿಸಿಕೊಟ್ಟವರು ಶಿವಕುಮಾರ ಸ್ವಾಮೀಜಿ ಎಂದು ಹೇಳಿದರು.
ಮಾಜಿ ಶಾಸಕ ಎಂ. ಕೆ. ಸೋಮಶೇಖರ್ ಮಾತನಾಡಿ,ಶಿವಕುಮಾರ ಸ್ವಾಮೀಜಿಯವರ ಸ್ಮರಣೆಯೇ ನಮಗೆ ಬೆಳಕು. ಅವರು ಕರಗದೇ ಇರುವ ಮುತ್ತು. ತಮ್ಮ ಜೀವನವೇ ಸಂದೇಶ ಎಂಬಂತೆ ಬದುಕಿದ ಶ್ರೀಗಳು ಪ್ರತಿಯೊಬ್ಬರಿಗೂ ಮಾದರಿಯಾಗಿದ್ದಾರೆ ಎಂದು ತಿಳಿಸಿದರು. ನಂತರ ಭಕ್ತಾದಿಗಳಿಗೆ ಸಿಹಿ ವಿತರಿಸಲಾಯಿತು
ನಗರಪಾಲಿಕ ಸದಸ್ಯರಾದ ಮ. ವಿ. ರಾಮಪ್ರಸಾದ್, ಮೃಗಾಲಯ ಪ್ರಾಧಿಕಾರ ಸದಸ್ಯರಾದ ಜ್ಯೋತಿ ರೇಚಣ್ಣ, ಕೆ. ಆರ್. ಬ್ಯಾಂಕ್ ಉಪಾಧ್ಯಕ್ಷ ಬಸವರಾಜ್ ಬಸಪ್ಪ, ಕೃಷ್ಣರಾಜ ಯುವ ಬಳಗದ ಅಧ್ಯಕ್ಷ ನವೀನ್ ಕೆಂಪಿ, ಶಿವಕುಮಾರ್,
ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಶ್ರೀಕಾಂತ್ ಕಶ್ಯಪ್, ನಂದೀಶ್ ನಾಯಕ್, ಸುಚೇಂದ್ರ, ಯೋಗೇಶ್, ಮಂಜಪ್ಪ, ರಾಜೇಶ್, ಬೆಳ್ಳಿಯಪ್ಪ ಮತ್ತಿತರರು ಭಾಗವಹಿಸಿದ್ದರು.