ಅನಧಿಕೃತ ಮದ್ಯ ಮಾರಾಟ: ಕಟ್ಟುನಿಟ್ಟಿನ ಕ್ರಮಕ್ಕೆಡಿಸಿ ಸೂಚನೆ

ಮೈಸೂರು: ಚುನಾವಣೆ ನೀತಿ ಸಂಹಿತೆ ಜಾರಿಯಾಗಿದ್ದು ಜಿಲ್ಲೆಯಲ್ಲಿ ಅನಧಿಕೃತ ಮದ್ಯ ಮಾರಾಟ ಕಂಡುಬಂದರೆ ಪ್ರಕರಣ ದಾಖಲಿಸಿ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಿ ಎಂದು ಅಬಕಾರಿ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ. ವಿ. ರಾಜೇಂದ್ರ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ  ಅಬಕಾರಿ  ಹಾಗೂ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

ಹೆಚ್ ಡಿ ಕೋಟೆ, ಸರಗೂರು ಗುಡ್ಡಗಾಡು ಪ್ರದೇಶದಲ್ಲಿ ಕಳಭಟ್ಟಿ ಪ್ರಕರಣಗಳು ಕಂಡುಬಂದರೆ ಕೂಡಲೇ ಕಾನೂನು ರೀತಿ ಕ್ರಮಕೈಗೊಳ್ಳಬೇಕೆಂದು ಆದೇಶಿಸಿದರು.

ಆಮಿಷವೊಡ್ಡಲು ಲಿಕ್ಕರ್ ಶಾಪ್ ಗಳಲ್ಲಿಬಾರ್ ಹಾಗೂ ರೆಸ್ಟೋರೆಂಟ್ ಗಳಲ್ಲಿ ಜನರಿಗೆ ಲಿಕ್ಕರ್ ನೀಡಿ ಬೇರೆಯವರು ದುಡ್ಡು ಪಾವತಿ ಮಾಡುವ ಬಗ್ಗೆ ಗಮನಹರಿಸಿ, ಜತೆಗೆ ಬಾರ್ ಅಂಡ್  ರೆಸ್ಟೋರೆಂಟ್ ಗಳ ಮಾಲೀಕರಿಗೂ ಎಚ್ಚರಿಕೆ ನೀಡಿ ಎಂದು ರಾಜೇಂದ್ರ  ತಿಳಿಸಿದರು.

ಬಾರ್ ಗಳಿಂದ ಮನೆಗಳಿಗೆ ಬಲ್ಕ್ ಆಗಿ ಲಿಕ್ಕರ್ ಸರಬರಾಜು ಮಾಡುವ ಬಗ್ಗೆ ಗಮನಹರಿಸಿ, ಹಳ್ಳಿಗಳ ಕಿರಾಣಿ ಅಂಗಡಿಗಳು ಹಾಗೂ ಮನೆಗಳಲ್ಲಿ ಮದ್ಯ ಮಾರಾಟ ಕುರಿತು ಪರಿಶೀಲಿಸಿ, ಮಾರಾಟ ಕಂಡುಬಂದರೆ ಪ್ರಕರಣ ದಾಖಲಿಸಿ ಎಂದು ಹೇಳಿದರು.

ಅಬಕಾರಿ ಇಲಾಖೆ ವತಿಯಿಂದ ಚೆಕ್ ಪೋಸ್ಟ್ ಗಳಲ್ಲೂ ಪರಿಶೀಲನೆ ಮಾಡಬೇಕು ಎಂದು ಸೂಚಿಸಿದರು.

ವಾಣಿಜ್ಯ ತೆರಿಗೆ ಇಲಾಖೆ ಸಿಬ್ಬಂದಿಯನ್ನು ಎಲ್ಲ ಚೆಕ್ ಪೋಸ್ಟ್ ಗಳಲ್ಲಿ  ನಿಯೋಜಿಸಬೇಕು. ಕೇರಳದಿಂದ ಬರುವ ಕಮರ್ಷಿಯಲ್ ವಾಹನಗಳನ್ನು ಪರಿಶೀಲಿಸಬೇಕು ಎಂದು ಸೂಚಿಸಿದರು.

ಜನರಿಗೆ ಆಮಿಷ ಒಡ್ಡಲು ಹೆಚ್ಚಿನ ಮೊತ್ತದ ನಗದು ಹಣ, ಸೀರೆ, ಕುಕ್ಕರ್, ಪಾತ್ರೆ, ಬಟ್ಟೆಗಳು ಮತ್ತಿತರ ಸಾಮಗ್ರಿಗಳನ್ನು ಅಕ್ರಮವಾಗಿ ಸಾಗಣೆ ಮಾಡುವ ಸಂಭವವಿರುತ್ತದೆ. ಆದ್ದರಿಂದ ಹದ್ದಿನ ಕಣ್ಣಿರಿಸಿ ವಾಹನಗಳ ತಪಾಸಣೆ ನಡೆಸಬೇಕುತಪಾಸಣೆ ಕಾರ್ಯದ ವಿಡಿಯೋ ಚಿತ್ರೀಕರಣ ಮಾಡಬೇಕು ಎಂದು ಡಾ.ರಾಜೇಂದ್ರ ತಿಳಿಸಿದರು.

ಸಭೆಯಲ್ಲಿ ಅಬಕಾರಿ ಇಲಾಖೆಯ ಜಿಲ್ಲಾ ಅಧಿಕಾರಿ ರವಿಶಂಕರ್, ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿ ಕಂಬಣ್ಣ ಮತ್ತು ಅಬಕಾರಿ ಇಲಾಖೆ ಹಾಗೂ ಸಾರಿಗೆ ಇಲಾಖೆ ಅಧಿಕಾರಿಗಳು ಉಪಸ್ಧಿತರಿದ್ದರು.