ಮೈಸೂರು: ಬ್ಯಾಂಕ್ ನಗದು ವ್ಯವಹಾರದ ಮೇಲೆ ನಿಗಾ ಇಡುವ ಮೂಲಕ ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ನೀತಿ ಸಂಹಿತೆ ನೋಡಲ್ ಅಧಿಕಾರಿ ಕೆ.ಎಂ ಗಾಯಿತ್ರಿ ಸೂಚಿಸಿದರು.
ವಿಧಾನಸಭಾ ಚುನಾವಣೆ ಪ್ರಯುಕ್ತ ಮೈಸೂರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬ್ಯಾಂಕ್ ವಹಿವಾಟಿನಲ್ಲಿ ಅನುಸರಿಸಬೇಕಾದ ಕ್ರಮಗಳ ಕುರಿತು ಲೀಡ್ ಬ್ಯಾಂಕ್ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.
SAG ಅಕೌಂಟ್ ಗಳಿಗೆ ಸಾಲ ಮಂಜೂರು ಮಾಡುವ ಸಂಬಂಧ ಚುನಾವಣಾ ಆಯೋಗದಿಂದ ಸ್ಪಷ್ಟೀಕರಣ ಕೇಳಿರುವ ಹಿನ್ನೆಲೆಯಲ್ಲಿ ಸ್ಪಷ್ಟೀಕರಣ ಬಂದ ನಂತರ ಸಾಲ ಮಂಜೂರು ಮಾಡಲು ಕ್ರಮವಹಿಸುವಂತೆ ಸೂಚಿಸಿದರು.
ಸ್ವೀಪ್ ಕಾರ್ಯಕ್ರಮದ ಅಂಗವಾಗಿ ವೋಟರ್ ರಿಜಿಸ್ಟ್ರೇಷನ್ ಅಪ್ಲಿಕೇಶನ್ ಕುರಿತು ಬ್ಯಾಂಕ್ ಮ್ಯಾನೇಜರ್ ಗಳಿಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಆಯುಕ್ತರು, ಪ್ರಾಚ್ಯ ವಸ್ತು ಮತ್ತು ಸಂಗ್ರಹಾಲಯ,ಲೀಡ್ ಬ್ಯಾಂಕ್ ವ್ಯವಸ್ಥಾಪಕರು, ಮುಖ್ಯ ಲೆಕ್ಕಾಧಿಕಾರಿಗಳು, ಜಿಲ್ಲಾ ಪಂಚಾಯತ್, ಹಾಗೂ ಮೈಸೂರು ಜಿಲ್ಲೆಯ ಎಲ್ಲಾ ಬ್ಯಾಂಕ್ ವ್ಯವಸ್ಥಾಪಕರು ಹಾಜರಿದ್ದರು.