ಸೆಕ್ಟರ್ ಆಫೀಸರ್ ಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ -ಡಾ.ಕೆ ವಿ ರಾಜೇಂದ್ರ

ಮೈಸೂರು: ಚುನಾವಣಾ ಪ್ರಕ್ರಿಯೆಯಲ್ಲಿ ಸೆಕ್ಟರ್ ಆಫೀಸರ್ ಗಳ ಕೆಲಸ ಪ್ರಮುಖವಾಗಿದ್ದು, ಕರ್ತವ್ಯ ಮತ್ತು ಜವಾಬ್ದಾರಿಯನ್ನು ಅರಿತು ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾ ಚುನಾವಣಾ ಅಧಿಕಾರಿ ಹಾಗೂ ಜಿಲ್ಲಾಧಿಕಾರಿಗಳಾದ ಡಾ. ಕೆ ವಿ ರಾಜೇಂದ್ರ ತಿಳಿಸಿದರು.

ನಂಜನಗೂಡು ಮತ್ತು ವರುಣಾ ಕ್ಷೇತ್ರಗಳ ಫ್ಲೈಯಿಂಗ್ ಸ್ಕ್ವಾಡ್ ಹಾಗೂ ಸ್ಟಾಟಿಸ್ಟಿಕ್ ಸರ್ವೇಲೆನ್ಸ್ ತಂಡದ ಸದಸ್ಯರು ನಿರ್ವಹಿಸಬೇಕಾದ ಕರ್ತವ್ಯಗಳು ಮತ್ತು ಜವಾಬ್ದಾರಿ ಕುರಿತು ಹಮ್ಮಿಕೊಂಡಿದ್ದ ತರಬೇತಿ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಸೆಕ್ಟರ್ ಅಧಿಕಾರಿಗಳು ಬೂತ್ ಲೆವೆಲ್  ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದು ಸಮಸ್ಯೆ ಕಂಡು ಬಂದಲ್ಲಿ ಪರಿಹರಿಸಬೇಕು ಎಂದು ಸೂಚಿಸಿದರು.

ಮತದಾರರ ಪಟ್ಟಿಯಲ್ಲಿ ಹೆಸರು ಬಿಟ್ಟು ಹೋಗಿದ್ದರೆ ಹಾಗೂ ಹೊಸದಾಗಿ ಹೆಸರು ಸೇರಿಸಲು ಏಪ್ರಿಲ್ 11ರವರೆಗೆ ಅವಕಾಶವಿದ್ದು, ಬಂದ ಅರ್ಜಿಗಳನ್ನು ಸ್ವೀಕರಿಸಿ ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ತಿಳಿಸಿದರು.

ಸಿ-ವಿಜಿಲ್ ಮೂಲಕ ದಾಖಲಾದ ದೂರುಗಳಿಗೆ ನೂರು ನಿಮಿಷಗಳಲ್ಲಿ  ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗುವುದು. ವಲ್ನರಬಲ್ ಹಾಗೂ ಕ್ರಿಟಿಕಲ್ ಪೋಲಿಂಗ್ ಸ್ಟೇಷನ್ ಗಳನ್ನು ಗುರುತಿಸಿದ್ದು, ಅವುಗಳ ಸರಿಯಾದ ನಿರ್ವಹಣೆಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಗಮನಹರಿಸಬೇಕು ಎಂದು ತಿಳಿಸಿದರು.

ಮತಗಟ್ಟೆಯಲ್ಲಿ ಕುಡಿಯುವ ನೀರು ಸೇರಿ ಕನಿಷ್ಠ ಸೌಲಭ್ಯಗಳಿರುವಂತೆ ನೋಡಿಕೊಳ್ಳಬೇಕು.

ಇವಿಎಂ ಮತ್ತು ವಿವಿಪ್ಯಾಟ್ ಗಳ ನಿರ್ವಹಣೆಯಲ್ಲಿ ಅಥವಾ ಇವುಗಳ ಬಳಕೆಯಲ್ಲಿ ಸಮಸ್ಯೆಯಾದರೆ ರಿಪ್ಲೇಸ್ ಮಾಡಿಕೊಡಲಾಗುವುದು.

ಎಫ್ ಎಸ್ ಟಿ ಮತ್ತು ಎಸ್ ಎಸ್ ಟಿ ತಂಡದವರಿಗೆ ವಾಹನ ಪೂರೈಕೆ ಮಾಡಲು ಆರ್ ಓ ಹಾಗೂ ಎಆರ್ ಓ ಗಳಿಗೆ ಸೂಚಿಸಿದರು.

ತರಬೇತಿಯಲ್ಲಿ ಜಿಲ್ಲಾ ಮಾದರಿ ನೀತಿ ಸಂಹಿತೆ ನೋಡಲ್ ಅಧಿಕಾರಿ ಹಾಗೂ ಜಿ. ಪಂ ಸಿಇಒ ಕೆ.ಎಂ ಗಾಯತ್ರಿ, ಪ್ರಾಚ್ಯ ವಸ್ತು ಸಂಗ್ರಹಾಲಯದ ಆಯುಕ್ತ ದೇವರಾಜ್ ಮತ್ತಿತರರು ಉಪಸ್ಥಿತರಿದ್ದರು.