ಕೃಷಿ ಇಲಾಖೆ ಕಚೇರಿ ಮೇಲೆ ಲೋಕಾಯುಕ್ತ ದಾಳಿ: ಮೂವರ ಬಂಧನ

(ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ)

ಚಾಮರಾಜನಗರ: ಕೃಷಿ ಇಲಾಖೆ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ಮೂವರನ್ನ ಬಂದಿಸಿದ್ದಾರೆ.

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ಕೃಷಿ ಇಲಾಖೆ ಕಚೇರಿ ಮೇಲೆ ದಾಳಿ ಮಾಡಲಾಗಿದೆ.

ಸಹಾಯಕ ನಿರ್ದೇಶಕ ಪ್ರವೀಣ್ ಕುಮಾರ್ ಮತ್ತು ತಾಂತ್ರಿಕ ವರ್ಗದ ಸತೀಶ್ ಹಾಗೂ ಡಿ ಗ್ರೂಪ್ ಹೊರಗುತ್ತಿಗೆ ನೌಕರ ಅರುಣ ಎಂಬವರನ್ನು ಲೋಕಾಯುಕ್ತ ಪೊಲೀಸರು ಬಂದಿಸಿದ್ದಾರೆ.

ಕಂಪನಿಯೊಂದಕ್ಕೆ ಬಿಲ್ ಮಾಡುವ ವಿಚಾರದಲ್ಲಿ ಲಂಚಕ್ಕೆ ಬೇಡಿಕೆ ಇಟ್ಟು, 2.5 ಲಕ್ಷ ರೂ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ಮೂವರನ್ನು ಬಂಧಿಸಿದ್ದಾರೆ.

ಚಾಮರಾಜನಗರ ಲೋಕಾಯುಕ್ತ ಡಿ ವೈ ಎಸ್ ಪಿ ಥಾಮಸ್ ಮತ್ತು, ಇನ್ಸ್ ಪೆಕ್ಟರ್ ಶಶಿಕುಮಾರ್ ಮಹಾಲಿಂಗಸ್ವಾಮಿ, ಗುರುಪ್ರಸಾದ್, ಶ್ರೀನಿವಾಸ್ ಮತ್ತು ಸಿಬ್ಬಂದಿ ದಾಳಿಯಲ್ಲಿ ಭಾಗವಹಿಸಿದ್ದರು.