ಅಕ್ರಮವಾಗಿ ಹಣ ಸಾಗಾಟ: ಲಕ್ಷಾಂತರ ರೂ. ಜಪ್ತಿ

ಮೈಸೂರು: ಚುನಾವಣಾ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು ಆಮಿಷ ಒಡ್ಡುವವರ ಬಗ್ಗೆ  ತೀವ್ರ ನಿಗಾ ವಹಿಸಿದ್ದು ಮಿಂಚಿನ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಸಾಗಿಸುತ್ತಿದ್ದ ಲಕ್ಷಾಂತರ ಹಣ ವಶಪಡಿಸಿಕೊಂಡಿದ್ದಾರೆ.

ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಮೂರು ಚೆಕ್ ಪೋಸ್ಟ್ ಗಳಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 5.36 ಲಕ್ಷ ನಗದು ವಶಪಡಿಸಿಕೊಳ್ಳಲಾಗಿದೆ.

ಮನುಗನಹಳ್ಳಿ ಚೆಕ್ ಪೋಸ್ಟ್ ನಲ್ಲಿ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ತಲಾ 93 ಸಾವಿರ,ಉಮ್ಮತ್ತೂರು ಚೆಕ್ ಪೋಸ್ಟ್ ನಲ್ಲಿ 2.5 ಲಕ್ಷ ರೂ. ಹಾಗೂ ಎಂ.ಆರ್.ಹೊಸಳ್ಳಿ ಚೆಕ್ ಪೋಸ್ಟ್ ನಲ್ಲಿ 1 ಲಕ್ಷ ನಗದು ವಶಪಡಿಸಿಕೊಳ್ಳಲಾಗಿದೆ.

ದಾಖಲೆ ಇಲ್ಲದೆ ಸಾಗಿಸಲಾಗುತ್ತಿದ್ದ ಈ ಹಣವನ್ನ ಅಧಿಕಾರಿಗಳು ನಿಯಮಾನುಸಾರ  ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಗಳ ವಶಕ್ಕೆ ನೀಡಿದ್ದಾರೆ.