ಮೈಸೂರು: ಜಿಲ್ಲೆಯ ಪ್ರತಿ ಮತಗಟ್ಟೆಗಳಲ್ಲಿಯೂ ಮತದಾರರಿಗೆ ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸಿ ಮತದಾರ ಸ್ನೇಹಿಯಾಗಿರುವಂತೆ ನೋಡಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಸೂಚಿಸಿದರು
ಜಿಲ್ಲಾಡಳಿತ ಭವನದಲ್ಲಿ ನಡೆದ ವಿಡಿಯೋ ಕಾನ್ಫರೆನ್ಸ್ ನಂತರ ಅಧಿಕಾರಿಗಳೊಂದಿಗೆ ಮಾತನಾಡಿದ ಅವರು ಎಲ್ಲಾ ಮತಗಟ್ಟೆಗಳಲ್ಲಿ ಅಗತ್ಯ ಕುಡಿಯುವ ನೀರು,ನೆರಳು,ಮಹಿಳೆ ಹಾಗೂ ಪುರುಷರಿಗೆ ಪ್ರತ್ಯೇಕ ಶೌಚಾಲಯ ಇರುವಂತೆ ನೋಡಿಕೊಳ್ಳಿ ಎಂದು ಹೇಳಿದರು.
ಜಿಲ್ಲಾ ಹಾಗೂ ತಾಲ್ಲೂಕು ಗಡಿಗಳ ಚೆಕ್ ಪೋಸ್ಟ್ ಗಳಲ್ಲಿ ಕಡ್ಡಾಯ ತಪಾಸಣೆ ಮಾಡಿ, ನಿಮ್ಮ ಕಾರ್ಯ ವೈಖರಿಯನ್ನು ಸರ್ವಜನಿಕರು ಹಾಗೂ ಜಾಲತಾಣಿಗರು ಗಮನಿಸುತ್ತಿರುತ್ತಾರೆ ಹಾಗಾಗಿ ಎಚ್ಚರಿಕೆಯಿಂದ ಕೆಲಸ ಮಾಡಿ ಎಂದು ಆದೇಶಿಸಿದರು.
ಅತಿಹೆಚ್ಚಿನ ಪ್ರಮಾಣದಲ್ಲಿ ಮತದಾನ ಮಾಡಿಸಲು ಎಲ್ಲಾ ಸಾಧ್ಯತೆಗಳ ಬಗೆಗೆ ಗಮನಹರಿಸಿ,80ವರ್ಷ ಮೇಲ್ಪಟ್ಟವರು ಹಾಗೂ ವಿಕಲಚೇತನರಿಗೆ ವಿಶೇಷ ಗಮನಹರಿಸಲು ಸೂಚಿಸಿದರು
ಸಭೆಯಲ್ಲಿ ಎಸ್.ಪಿ.ಸೀಮಾ ಲಾಟ್ಕರ್,ಜಿ.ಪಂ.ಸಿಇಒ ಗಾಯತ್ರಿ ಕೆ.ಎಂ,ಅಪರ ಜಿಲ್ಲಾಧಿಕಾರಿ ಕವಿತ ರಾಜಾರಾಂ, ಮಹಾನಗರ ಪಾಲಿಕೆ ಆಯುಕ್ತ ಲಕ್ಷ್ಮೀಕಾಂತ ರೆಡ್ಡಿ ಮತ್ತು ತಾಲ್ಲೂಕು ಚುನಾವಣಾ ಅಧಿಕಾರಿಗಳು ಪಾಲ್ಗೊಂಡಿದ್ದರು.