ಮಂಗಳೂರು: ಕಾಂಗ್ರೆಸ್ ಪಕ್ಷದವರಿಗೆ 60 ರಿಂದ 65 ಕ್ಷೇತ್ರಗಳಿಗೆ ಅಭ್ಯರ್ಥಿಗಳೇ ಇಲ್ಲ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಟೀಕಿಸಿದ್ದಾರೆ.
ಮಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು,ಕಾಂಗ್ರೆಸ್ ನವರು ಅಭ್ಯರ್ಥಿಗಳನ್ನು ಅಮದು ಮಾಡಿಕೊಳ್ಳುವ ಲೆಕ್ಕಚಾರದಲ್ಲಿದ್ದಾರೆ ಎಂದು ಹೇಳಿದರು.
ಕಾಂಗ್ರೆಸ್ ಗೆ ಸಮರ್ಥ ಅಭ್ಯರ್ಥಿಗಳೇ ಇಲ್ಲ ಹಾಗಾಗಿ ಅವರು ಅಧಿಕಾರಕ್ಕೆ ಬರಲು ಸಾಧ್ಯವಾಗುವುದಿಲ್ಲ ಎಂದು ಭವಿಷ್ಯ ನುಡಿದರು.
ನಮ್ಮ ಪಕ್ಷದಲ್ಲಿ ಉಂಟಾಗಿರುವ ಭಿನ್ನಮತವನ್ನ ಶೀಘ್ರವೇ ಬಗೆಹರಿಸುತ್ತೇವೆ ಎಂದು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು.
ಅಸಮಾಧಾನಿತರನ್ನ ಕರೆದು ಹೈಕಮಾಂಡ್ ಮಾತನಾಡುತ್ತಾರೆ,ನಾನು ಎಲ್ಲ ನಾಯಕರ ಜತೆ ಮಾತನಾಡಿದ್ದೇನೆ ಶೀಘ್ರವೇ ಭಿನ್ನಮತ ಶಮನವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬಿಜೆಪಿ 2ನೇ ಪಟ್ಟಿ ಬಿಡುಗಡೆಯಾಗಿದೆ,ಇನ್ನು 12 ಕ್ಷೇತ್ರಗಳು ಬಾಕಿ ಇದೆ. ಕೆಲವೆಡೆ ಆಕಾಂಕ್ಷಿಗಳು ರಾಜೀನಾಮೆ ನೀಡಿದ್ದಾರೆ. ಉಳಿದ ಕ್ಷೇತ್ರಗಳಲ್ಲೂ ನಾವು ಅಚ್ಚರಿ ಅಭ್ಯರ್ಥಿ ಘೋಷಣೆ ಮಾಡುತ್ತೇವೆ ಎಂದು ಬೊಮ್ಮಾಯಿ ತಿಳಿಸಿದರು.