ಹಿರಿಕಾಟಿ ಚೆಕ್ ಪೋಸ್ಟ್ ಬಳಿ ದಾಖಲೆ ಇಲ್ಲದ 34 ಲಕ್ಷ ರೂ.ವಶ

(ವರದಿ: ವೀರಭದ್ರಸ್ವಾಮಿ)

ಚಾಮರಾಜನಗರ: ಚುನಾವಣಾ ಅಧಿಕಾರಿಗಳು ಎಷ್ಟೇ‌‌ ಎಚ್ಚರಿಕೆ ವಹಿಸಿದ್ದರೂ ಪ್ರಳಯಾಂತಕ‌ ಆಸಾಮಿಗಳು ಹಣ ಸಾಗಿಸಲು ಯತ್ನಿಸುತ್ತಲೇ ಇದ್ದಾರೆ.

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಿರಿಕಾಟಿ ಚೆಕ್ ಪೋಸ್ಟ್ ನಲ್ಲಿ ಇಂದು ಸಮರ್ಪಕವಾದ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 34 ಲಕ್ಷ ರೂ ಹಣವನ್ನು ವಶಕ್ಕೆ ಪಡೆಯಲಾಗಿದೆ.

ವಾಹನ ತಪಾಸಣಾ ವೇಳೆಯಲ್ಲಿ ಚುನಾವಣಾ ಕರ್ತವ್ಯಕ್ಕೆ  ಸಂಬಂಧಿಸಿದಂತೆ ನಿಯೋಜನೆಯಾಗಿದ್ದ ಅಧಿಕಾರಿಗಳ ತಂಡ ಹಾಗೂ ಪೊಲೀಸ್ ಅಧಿಕಾರಿ ಸಿಬ್ಬಂದಿ  ದಾಖಲೆ ಇಲ್ಲದ ಹಣವನ್ನು  ವಶಕ್ಕೆ ಪಡೆದುಕೊಂಡಿದ್ದಾರೆ.

ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆಯನ್ನು ಕಟ್ಟು ನಿಟ್ಟಾಗಿ ಜಾರಿಗೊಳಿಸಲಾಗಿದೆ ಎಂದು ಗುಂಡ್ಲುಪೇಟೆ ವಿಧಾನ ಸಭಾ ಕ್ಷೇತ್ರದ ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.