ಬೆಂಗಳೂರು: ಈಗಾಗಲೇ ವಿಧಾನಸಭೆ ಚುನಾವಣೆಯ ಜೆಡಿಎಸ್ ಅಭ್ಯರ್ಥಿಗಳ ಎರಡು ಪಟ್ಟಿಗಳನ್ನು ಬಿಡುಗಡೆ ಮಾಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಶನಿವಾರ ಮತ್ತೆ ಐದು ಅಭ್ಯರ್ಥಿಗಳ ಹೆಸರುಗಳನ್ನು ಘೋಷಣೆ ಮಾಡಿದ್ದಾರೆ.
ಚಿತ್ರದುರ್ಗಕ್ಕೆ ವಿಧಾನ ಪರಿಷತ್ ನ ಮಾಜಿ ಸದಸ್ಯ ರಘು ಅಚಾರ್, ಮಡಿಕೇರಿಗೆ ಎನ್.ಎಂ.ಮುತ್ತಪ್ಪ, ಮೂಡಬಿದಿರೆಗೆ ಅಮರಶ್ರೀ, ವರುಣಾ ಕ್ಷೇತ್ರಕ್ಕೆ ಮಾಜಿ ಶಾಸಕ ಡಾ.ಭಾರತಿ ಶಂಕರ್, ಬಾಗಲಕೋಟೆ ಕ್ಷೇತ್ರಕ್ಕೆ ದೇವರಾಜ್ ಪಾಟೀಲ್ ಹಾಗೂ ಯಾದಗಿರಿ ಕ್ಷೇತ್ರಕ್ಕೆ ಮಾಜಿ ಸಚಿವ ಎ.ಬಿ.ಮಾಲಕರೆಡ್ಡಿ ಅವರುಗಳು ಜೆಡಿಎಸ್ ಅಭ್ಯರ್ಥಿಗಳು ಎಂದು ಸುದ್ದಿಗೋಷ್ಠಿಯಲ್ಲಿ ಕುಮಾರಸ್ವಾಮಿ ಪ್ರಕಟಿಸಿದರು.
ಇದೇ ವೇಳೆ ಬಿ.ಎಸ್.ಯಡಿಯೂರಪ್ಪ ಅವರ ಪರಮಾತ್ಮ ಹಾಗೂ ಸಂಬಂಧಿ, ಅರಸೀಕೆರೆ ವಿಧಾನಸಭೆ ಕ್ಷೇತ್ರದ ಅಭ್ಯರ್ಥಿಯಾದಎನ್. ಆರ್. ಸಂತೋಷ್ ಅವರು ಬಿಜೆಪಿ ತೊರೆದು ಜೆಡಿಎಸ್ ಪಕ್ಷವನ್ನು ಸೇರಿದರು.
ಇದೇ ಸಂದರ್ಭದಲ್ಲಿ ಬಾಗಲಕೋಟೆಯ ದೇವರಾಜ್ ಪಾಟೀಲ್ ಅವರು ಕಾಂಗ್ರೆಸ್ ತೊರೆದು ಪಕ್ಷಕ್ಕೆ ಸೇರಿದರು.
ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡ, ಹೆಚ್. ಡಿ. ಕುಮಾರಸ್ವಾಮಿ, ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರು ಎಲ್ಲ ನಾಯಕರಿಗೆ ಪಕ್ಷದ ಶಾಲು ಹೊದಿಸಿ ಬರಮಾಡಿಕೊಂಡರು.