ಶೆಟ್ಟರ್  ರಾಜೀನಾಮೆ:ಡ್ಯಾಮೇಜ್ ಕಂಟ್ರೋಲ್‌ಗೆ ತಂತ್ರ-ಬೊಮ್ಮಾಯಿ

ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ  ಜಗದೀಶ್ ಶೆಟ್ಟರ್ ಅವರು ರಾಜೀನಾಮೆ ನೀಡುವುದರಿಂದ ಪಕ್ಷಕ್ಕೆ ಡ್ಯಾಮೇಜ್ ಆಗುವುದು ಖಂಡಿತಾ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಹುಬ್ಬಳ್ಳಿಯ ತಮ್ಮ ನಿವಾಸದಲ್ಲಿ ಮಾಧ್ಯಮ ದವರ ಜೊತೆ ಮಾತನಾಡಿದ  ಅವರು,ಜಗದೀಶ್ ಶೆಟ್ಟರ್ ಪಕ್ಷ ಬಿಡುವುದರಿಂದ ಡ್ಯಾಮೇಜ್ ಕಂಟ್ರೋಲ್ ಆಗುವುದನ್ನು ತಪ್ಪಿಸಲು ತಂತ್ರ ರೂಪಿಸ್ತೇವೆ ಎಂದು ತಿಳಿಸಿದರು.

ಜಗದೀಶ್ ಶೆಟ್ಟರ್ ಉತ್ತರ ಕರ್ನಾಟಕದ ಹಿರಿಯ ನಾಯಕರು, ಅವರ ಮನವೊಲಿಕೆಗೆ ಎಲ್ಲ ಪ್ರಯತ್ನ ಮಾಡಿದ್ದೇವೆ,

ರಾಷ್ಟ್ರೀಯ ಮಟ್ಟದ ಸ್ಥಾನಮಾನ ಕೊಡುವ ಭರವಸೆ ನೀಡಿದೆವು,ಅವರ ಕುಟುಂಬಕ್ಕೂ ಟಿಕೆಟ್ ಭರವಸೆ ಕೊಟ್ಟಿದ್ದೆವು

ಆದರೂ ರಾಜೀನಾಮೆ ನಿರ್ಧಾರ ಕೈಗೊಂಡಿರೋದು ದುರ್ದೈವ ಎಂದು ವಿಷಾದಿಸಿದರು.