ಕೆ.ಆರ್.ಕ್ಷೇತ್ರದಲ್ಲಿ ‌ಶ್ರೀವತ್ಸ ನಾಮಪತ್ರ ಸಲ್ಲಿಕೆ

ಮೈಸೂರು: ತೀವ್ರ ಕುತೂಹಲ ಕೆರಳಿಸಿದ್ದ ಮೈಸೂರಿನ ಕೃಷ್ಣರಾಜ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಶ್ರೀವತ್ಸ ಅವರು ಗುರುವಾರ ತಮ್ಮ ಉಮೇದುವಾರಿಕೆ ಸಲ್ಲಿಸಿದರು.

ನಾಮಪತ್ರ ಸಲ್ಲಿಕೆಗೂ ಮೊದಲು ಮೈಸೂರಿನ ನೂರೊಂದು ಗಣಪತಿ ದೇವಸ್ಥಾನದಲ್ಲಿ ಅವರು ವಿಶೇಷ ಪೂಜೆ ಸಲ್ಲಿಸಿದರು.

ಆನಂತರ ತ್ಯಾಗರಾಜ ರಸ್ತೆಯಲ್ಲಿ ಜಾನಪದ ಕಲಾತಂಡಗಳೊಂದಿಗೆ ನೂರಾರು ಅಭಿಮಾನಿಗಳ ಜೊತೆಗೂಡಿ ಶ್ರೀವತ್ಸ ಮೈಸೂರು ಮಹಾನಗರ ಪಾಲಿಕೆ ಕಚೇರಿ ತಲುಪಿದರು.

ಬಿಜೆಪಿ ಕಾರ್ಯಕರ್ತರು,ಹಲವು ಬ್ರಾಹ್ಮಣ ಸಂಘಟನೆಗಳು ಮತ್ತು ಸ್ಥಳೀಯ ಬಿಜೆಪಿ ಮುಖಂಡರು ಶ್ರೀವತ್ಸ ಅವರಿಗೆ ಮೆರವಣಿಗೆಯಲ್ಲಿ ಸಾಗಿದರು.

ಆನಂತರ ಮೈಸೂರು ಮಹಾನಗರ ಪಾಲಿಕೆ ಕಚೇರಿಯಲ್ಲಿ ಶ್ರೀ ವತ್ಸ ಅವರು ನಾಮಪತ್ರ ಸಲ್ಲಿಕೆ ಮಾಡಿದರು.ಈ ಸಂದರ್ಭದಲ್ಲಿ ಶಾಸಕ ಎಸ್.ಎ. ರಾಮದಾಸ್, ಸಂಸದ ಪ್ರತಾಪ್ ಸಿಂಹ ಹಾಗೂ ಮೇಯರ್ ಶಿವಕುಮಾರ್ ಮತ್ತಿತರರು ಹಾಜರಿದ್ದರು.