ಶಿವಮೊಗ್ಗ: ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಚುನಾವಣಾ ರಾಜಕೀಯಕ್ಕೆ ಸ್ವಯಂ ನಿವೃತ್ತಿ ಘೋಷಣೆ ಮಾಡಿದ್ದಕ್ಕೆ ಅವರ ನಡೆಯನ್ನ ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ.
ನರೇಂದ್ರ ಮೋದಿ ಅವರು ಖುದ್ದು ಕೆ.ಎಸ್ ಈಶ್ವರಪ್ಪ ಅವರಿಗೆ ದೂರವಾಣಿ ಕರೆ ಮಾಡಿ ಅವರ ರಾಜಕೀಯ ಪ್ರಬುದ್ಧ ನಡೆಯನ್ನು ಪ್ರಶಂಶಿಸಿದ್ದಾರೆ.
ಜತೆಗೆ ಪಕ್ಷ ಸದಾ ನಿಮ್ಮ ಜೊತೆ ಇರಲಿದೆ ಎಂದು ಭರವಸೆ ನೀಡಿದ್ದಾರೆ.
ಮೋದಿ ಪ್ರಶಂಸೆ ವ್ಯಕ್ತಪಡಿಸಿರುವ ಬಗ್ಗೆ ಪ್ರತಿಕ್ರಿಯಿಸಿರುವ ಈಶ್ವರಪ್ಪ,ಪ್ರಧಾನಿ ಬೆಳಗ್ಗೆ ಕರೆ ಮಾಡಿದಾಗ ನನಗೆ ಅಚ್ಚರಿ ಆಯ್ತು, ಅವರು ಹೀಗೆ ಸಾಮಾನ್ಯ ಕಾರ್ಯಕರ್ತರನ್ನು ಗುರುತಿಸುತ್ತಿರುವುದು ಸಂತೋಷವಾಗಿದೆ ಎಂದು ಹೇಳಿದರು
ಇದು ಎಲ್ಲ ಕಾರ್ಯಕರ್ತರಿಗೆ ಸ್ಫೂರ್ತಿಯಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.