ಚಾಮರಾಜನಗರ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀಣಗೊಂಡ ವಿದ್ಯಾರ್ಥಿನಿ ಮನನೊಂದು ಆತಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ.
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಮೂಡಗೂರು ಗ್ರಾಮದ ವಿಜಯಲಕ್ಷ್ಮಿ (18) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.
ಚಾಮರಾಜನಗರ ಜೆಎಸ್ಎಸ್ ಕಾಲೇಜಿನಲ್ಲಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ಈಕೆ ಅದೇ ಸಂಸ್ಥೆಯ ವಸತಿನಿಲಯದಲ್ಲಿ ಉಳಿದುಕೊಂಡು ವ್ಯಾಸಂಗ ಮಾಡುತ್ತಿದ್ದಳು.
ದ್ವಿತೀಯ ಪಿಯುಸಿ ಫಲಿತಾಂಶದ ಶುಕ್ರವಾರ ಪ್ರಕಟವಾಗಿದೆ. ಈ ವಿದ್ಯಾರ್ಥಿನಿ ನಾಲ್ಕು ವಿಷಯಗಳಲ್ಲಿ ಅನುತ್ತೀರ್ಣವಾಗಿರುವುದು ತಿಳಿದುಬಂದಿದೆ.
ಹಾಗಾಗಿ ಮನನೊಂದು ಜೆಎಸ್ಎಸ್ ವಸತಿನಿಲಯದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಪಟ್ಟಣ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.