ಚಾಮರಾಜನಗರ: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಬಕಾರಿ ಅಕ್ರಮಗಳ ವಿರುದ್ದ ಕಾರ್ಯಾಚರಣೆ ತೀವ್ರಗೊಳಿಸಿದ್ದಾರೆ.
ಅಬಕಾರಿ ಇಲಾಖೆ ಅಧಿಕಾರಿಗಳು ಅಕ್ರಮವಾಗಿ ಸಾಗಿಸುತ್ತಿದ್ದ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ.
ಕೊಳ್ಳೇಗಾಲ ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಮುಂಭಾಗದಲ್ಲಿ ಗಸ್ತು ಮಾಡುತ್ತಿದ್ದಾಗ ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಸಾಗಾಣಿಕೆ ಮಾಡುತ್ತಿದ್ದ 4.050 ಲೀಟರ್ ಮದ್ಯ ಹಾಗೂ ವಾಹನವನ್ನು ವಶಪಡಿಸಿಕೊಂಡಿದ್ದಾರೆ.
ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಮದ್ಯ ಮತ್ತು ವಾಹನದ ಮೌಲ್ಯ 16940 ರೂ.ಗಳಾಗಿವೆ.
ಕೊಳ್ಳೇಗಾಲ ಪಟ್ಟಣದ ಕುರುಬನ ಕಟ್ಟೆ ರಸ್ತೆಯ ಕೃಷಿ ಉತ್ಪನ್ನ ಮಾರುಕಟ್ಟೆ ಕೇಂದ್ರದ ಮುಂಭಾಗದಲ್ಲಿ ರಾತ್ರಿ ಗಸ್ತು ಮಾಡುತ್ತಿದ್ದ ವೇಳೆ ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 8.640 ಲೀಟರ್ ಮದ್ಯ ಹಾಗೂ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ.
ಈ ಪ್ರಕರಣದ ಆರೋಪಿ ಪರಾರಿಯಾಗಿದ್ದು, ಈತನ ಪತ್ತೆಗೆ ಕ್ರಮವಹಿಸಲಾಗಿದೆ. ಮದ್ಯ ಮತ್ತು ವಾಹನದ ಮೌಲ್ಯ 28372 ರೂ.ಗಳಾಗಿವೆ.
ಈ ಎರಡೂ ಪ್ರಕರಣಗಳ ಬಗ್ಗೆ ಮೊಕದ್ದಮೆ ದಾಖಲಾಗಿದೆ.