ಮೈಸೂರು: ಜಿಲ್ಲಾಡಳಿತ ಹಾಗೂ ಜಿಲ್ಲಾ ಸ್ವೀಪ್ ಸಮಿತಿಯವರು ಈ ಬಾರಿ ಸಾರ್ವಜನಿಕರಲ್ಲಿ ಮತದಾನದ ಬಗ್ಗೆ ಅರಿವು ಮೂಡಿಸಲು ನಾನಾ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದ್ದಾರೆ.
ಜಿಲ್ಲಾಡಳಿತ ಹಾಗೂ ಜಿಲ್ಲಾ ಸ್ವೀಪ್ ಸಮಿತಿಯ ಅಧಿಕಾರಿಗಳು ಮತ್ತು ಸಿಬ್ಬಂದಿ ವಿಶೇಷ ಆಸಕ್ತಿ ವಹಿಸಿ ಕಾರ್ಯಕ್ರಮ ರೂಪಿಸುತ್ತಾರೆ.
ಶುಕ್ರವಾರ ನಗರದ ಕಲಾಮಂದಿರದ ಆವರಣದಲ್ಲಿ ಸಾಂಸ್ಕೃತಿಕ ನಗರಿ ಮೈಸೂರಿನ ಸಾಂಪ್ರದಾಯಿಕ ಉಡುಗೆ ತೊಡುವ ಮೂಲಕ ಮತದಾನ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ನಿಜಕ್ಕೂ ವಿಶೇಷವಾಗಿತ್ತು.
ಕಲಾಮಂದಿರದ ಆವರಣದಲ್ಲಿ ಬಣ್ಣದ ರಂಗೋಲಿ ಬಿಡಿಸಿ ಅದರಲ್ಲಿ ಇಂಡಿಯ ವೊಟ್ ಎಂದು ಇಂಗ್ಲೀಷ್ ನಲ್ಲೂ,ನಿಮ್ಮ ಮತ ನಿಮ್ಮ ಭವಿಷ್ಯ ಎಂದು ಕನ್ನಡದಲ್ಲಿ ಬರೆದು ಬಣ್ಣ ತುಂಬಿ ಆಕರ್ಶಕವಾಗಿ ಕಾಣುವಂತೆ ಮಾಡಿದ್ದಾರೆ.
ಕಲಾಮಂದಿರದ ಸ್ಟೆಪ್ಸ್ ಮೇಲೆ ಪುರುಷರು ಶರ್ಟ್,ಪಂಚೆ,ಮೈಸೂರು ಪೇಟ ಧರಿಸಿದ್ದರೆ ಕೆಲವರು ಜಾನಪದ ವೇಷಧಾರಿಯಾಗಿ ಪೋಸ್ ಕೊಟ್ಟಿದ್ದಾರೆ.
ಮಹಿಳಾ ಅಧಿಕಾರಿಗಳು ಮುಂದಿನ ಸಾಲಿನಲ್ಲಿ ನಿಂತವರು ಬಹುತೇಕರು ಸುಪ್ರಸಿದ್ದ ಮೈಸೂರು ಸಿಲ್ಕ್ ಸೀರೆಯಲ್ಲಿ ಮಿಂಚಿದ್ದಾರೆ.ಒಟ್ಟಾರೆ ಜಿಲ್ಲಾಡಳಿತ ಮತ್ತು ಸ್ವೀಪ್ ಸಮಿತಿ ವಿಶೇಷ ಮುತುವರ್ಜಿ ವಹಿಸಿ ಮತದಾನದ ಅರಿವು ಮೂಡಿಸುತ್ತಿದ್ದಾರೆ.
ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಕವಿತಾ ರಾಜರಾಂ, ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯತ್ರಿ, ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡಿದ್ದರು.