ಕರಾವಳಿ ಭಾಗದಲ್ಲಿ 10 ಕ್ಷೇತ್ರದಲ್ಲಿ ಗೆಲುವು -ಡಿಕೆಶಿ

ಕೊಲ್ಲೂರು: ಕರಾವಳಿ ಭಾಗದಲ್ಲಿ ಕಾಂಗ್ ಪಕ್ಷಕ್ಕೆ ಉತ್ತಮ ವಾತಾವರಣವಿದ್ದು ಕನಿಷ್ಠ 10 ಕ್ಷೇತ್ರಗಳನ್ನು ಗೆಲ್ಲುತ್ತೇವೆ ಎಂದುಕೆಪಿಸಿಸಿ ಅಧ್ಯಕ್ಷಡಿ.ಕೆ.ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು.

ಸೋಮವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು,

ಬಾರಿ ಬಿಜೆಪಿಯ ತಂತ್ರ ಫಲ ನೀಡುವುದಿಲ್ಲ ಎಂದು ತಿಳಿಸಿದರು.

ಬಾರಿಯ ಚುನಾವಣೆ ಭಾವನೆ ಹಾಗೂ ಬದುಕಿನ ನಡುವಣ ಚುನಾವಣೆ. ಬಿಜೆಪಿ ಭಾವನೆಗಳ ಮೇಲೆ ಚುನಾವಣೆ ಮಾಡಿದರೆ, ನಾವು ಬದುಕಿನ ಮೇಲೆ ಚುನಾವಣೆ ಮಾಡುತ್ತೇವೆ ಎಂದುಡಿಕೆಶಿ ಹೇಳಿದರು.

ಬಿಜೆಪಿಯವರ ಭ್ರಷ್ಟಾಚಾರ ನಿರ್ಮೂಲನೆಗೆ ನಾವು ಪಣ ತೊಟ್ಟಿದ್ದೇವೆ ಎಂದು ತಿಳಿಸಿದರು.

ಕಾಂಗ್ರೆಸ್ ಪಕ್ಷದ ಬಂಡಾಯ ಸ್ಪರ್ಧಿಗಳ ಬಗ್ಗೆ ಕೇಳಿದ ಪ್ರಶ್ನೆಗೆ, ಬಹುತೇಕ ಎಲ್ಲಾ ಅಭ್ಯರ್ಥಿಗಳು ನಾಮಪತ್ರ ಹಿಂಪಡೆಯುತ್ತಾರೆ. ಕೆಲವರಿಗೆ ಪಕ್ಷೇತರರಾಗಿ ಸ್ಪರ್ಧಿಸುವ ಚಟ ಇದ್ದು, ಮೊದಲಿನಿಂದಲೂ ಹಾಗೆ ಮಾಡಿದ್ದಾರೆ ಎಂದು ಗರಂ ಆಗಿ ನುಡಿದರು.

ಚಿಕ್ಕಪೇಟೆಯಲ್ಲಿ ಮಾಜಿ ಮೇಯರ್ ತಮ್ಮ ಅರ್ಜಿ ಹಿಂಪಡೆಯಲಿದ್ದಾರೆಎಂದು ತಿಳಿಸಿದರು.

ಸಿದ್ದರಾಮಯ್ಯ ಅವರ ಲಿಂಗಾಯತ ಸಮುದಾಯ ಕುರಿತ ವಿವಾದದ ಬಗ್ಗೆ ಕೇಳಿದಾಗ, ‘ಸಿದ್ದರಾಮಯ್ಯ ಅವರು ಅವರ ಕಾಲದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಹೇಳಿದ್ದಾರೆಯೇ ಹೊರತು, ಇಡೀ ಸಮುದಾಯ ಉದ್ದೇಶಿಸಿ ಹೇಳಿಲ್ಲ ಎಂದು ಡಿಕೆಶಿ ಸ್ಪಷ್ಟಪಡಿಸಿದರು.

ರಾಜ್ಯದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಬಿಜೆಪಿ ನಾಯಕರಾದ ಯತ್ನಾಳ್, ವಿಶ್ವನಾಥ್, ಗೂಳಿಹಟ್ಟಿ ಶೇಖರ್, ಕೆಂಪಣ್ಣ ಅವರು ಹೇಳಿದ್ದಾರೆ. ಸರ್ಕಾರದಲ್ಲಿ ಭ್ರಷ್ಟಾಚಾರ ನಡೆದಿರುವುದನ್ನು ಯಾರು ಮುಚ್ಚಿ ಹಾಕಲು ಸಾಧ್ಯವಿಲ್ಲ ಎಂದು ಹೇಳಿದರು.

ರಾಜ್ಯದಲ್ಲಿ 40% ಕಮಿಷನ್, ಪಿ ಎಸ್ ಸೇರಿದಂತೆ ನೇಮಕಾತಿ ಹಗರಣ, ವಿವಿ ಉಪಕುಲಪತಿ ನೇಮಕಕ್ಕೆ ಹಣ ಪಡೆದಿರುವುದು ನಮ್ಮ ಕಾಲದಲ್ಲಿ ಆಗಿದೆಯಾ ಎಂದು ಮಾಧ್ಯಮದವರನ್ನೇ ಪ್ರಶ್ನಿಸಿದರು.

ಬಾರಿ ಲಿಂಗಾಯತ ಸಮುದಾಯ ಕಾಂಗ್ರೆಸ್ ಪಕ್ಷದ ಕೈ ಹಿಡಿಯಲಿದೆಯೆ ಎಂಬ ಪ್ರಶ್ನೆಗೆ, ಬಿಜೆಪಿ ಆಣೆಕಟ್ಟು ಒಡೆದಿದೆ. ಕೇವಲ ಲಿಂಗಾಯತ ಸಮುದಾಯ ಮಾತ್ರವಲ್ಲ, ಎಲ್ಲಾ ಸಮುದಾಯದ ನಾಯಕರು ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತಿದ್ದಾರೆ.

ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದ್ದು, ಉತ್ತಮ ಆಡಳಿತ ನೀಡಲಾಗುವುದು ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು.