ಶ್ರೀ ಶಂಕರಾಚಾರ್ಯರ ಜಯಂತಿ ಆಚರಣೆ

ಮೈಸೂರು: ಮೈಸೂರು ಜಿಲ್ಲಾಡಳಿತ ವತಿಯಿಂದ ಶ್ರೀ ಶಂಕರಾಚಾರ್ಯರ 1235ನೇ ಜಯಂತಿಯನ್ನು ತತ್ವಜ್ಞಾನಿಗಳ ದಿನಾಚರಣೆಯನ್ನಾಗಿ ಆಚರಿಸಲಾಯಿತು.

ಮೈಸೂರಿನ ಕಲಾಮಂದಿರದಲ್ಲಿ ಚುನಾವಣೆಯ ನೀತಿ ಸಮಿತಿ ಹಿನ್ನೆಲೆಯಲ್ಲಿ ಶ್ರೀ ಶಂಕರಾಚಾರ್ಯರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಸರಳವಾಗಿ ಆಚರಿಸಲಾಯಿತು.

ಜಿಲ್ಲಾಡಳಿತ ಜಂಟಿ ನಿರ್ದೇಶಕರಾದ ವಿ.ಎನ್ ಮಲ್ಲಿಕಾರ್ಜುನಸ್ವಾಮಿ, ಕನ್ನಡ ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಡಾ. ಎಂ ಡಿ ಸುದರ್ಶನ್, ಮೈಸೂರು ಬ್ರಾಹ್ಮಣ ಸಂಘದ ಅಧ್ಯಕ್ಷ ಡಿ.ಟಿ. ಪ್ರಕಾಶ್, ವಿಪ್ರ ಮುಖಂಡರಾದ ಶ್ರೀಕಂಠಕುಮಾರ್, ಹಿರಿಯ ಸಮಾಜಸೇವಕರಾದ ಡಾ.ಕೆ ರಘುರಾಮ ವಾಜಪೇಯಿ, ಅಪೂರ್ವ ಸುರೇಶ್, ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ಪ್ರಧಾನ ಕಾರ್ಯದರ್ಶಿ ವಿಕ್ರಮ್ ಅಯ್ಯಂಗಾರ್, ಸಂಘಟನಾ ಕಾರ್ಯದರ್ಶಿ ಅಜಯ್ ಶಾಸ್ತ್ರಿ, ಕಡಕೊಳ ಜಗದೀಶ್, ಸುಚೀಂದ್ರ, ರಂಗನಾಥ್, ಶ್ರೀಕಾಂತ್ ಕಶ್ಯಪ್, ಮಂಜುನಾಥ್, ಪ್ರಶಾಂತ್,ನಗರ ಪಾಲಿಕೆ ಮಾಜಿ ಸದಸ್ಯರಾದ ಸೌಭಾಗ್ಯ ಮೂರ್ತಿ, ಜ್ಯೋತಿ ,ನಾಗಶ್ರೀ ಸುಚೀಂದ್ರ ಮತ್ತಿತರರು ಹಾಜರಿದ್ದರು.