80 ವರ್ಷ ಮೇಲ್ಪಟ್ಟ – ವಿಶೇಷ ಚೇತನರಿಗೆ ಮನೆಯಿಂದಲೇ ಮತದಾನಕ್ಕೆ ಚಾಲನೆ

ಮೈಸೂರು: 12ಡಿ ಅಡಿ ಅರ್ಜಿ ನೀಡಿರುವ 80 ವರ್ಷ ಮೇಲ್ಪಟ್ಟ ಹಾಗೂ ವಿಶೇಷಚೇತನ ಮತದಾರರಿಗೆ ಮನೆಯಿಂದಲೇ‌ ಮತದಾನ ಮಾಡಲು ಚಾಲನೆ ನೀಡಲಾಯಿತು.

ಕೃಷ್ಣರಾಜ ಕ್ಷೇತ್ರದ ಕತ್ವಾವಾಡಿಪುರ ಅಗ್ರಹಾರ ಎರಡನೆ ಕ್ರಾಸ್ ರಂಗಸ್ವಾಮಿ ಎಂಬವರ ಮನೆಗೆ ಚುನಾವಣ ಅಧಿಕಾರಿಗಳು ಆಗಮಿಸಿ ಮತದಾನ ಪ್ರಕ್ರಿಯೆಗೆ ಚಾಲನೆ ನೀಡಿದರು.

ಇದೇ ಶನಿವಾರದಿಂದ ಮೇ 6 ರ ವರೆಗೆ ಮನೆ ಮನೆಗೆ ತೆರಳಿ ಬ್ಯಾಲೆಟ್ ಪೇಪರ್ ನೀಡಿ ಮತದಾನ ಮಾಡಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಕೆ.ವಿ.ರಾಜೇಂದ್ರ  ತಿಳಿಸಿದ್ದಾರೆ.

ಈಗಾಗಲೇ 12 ಡಿ ಅಡಿ ಅರ್ಜಿ ಸಲ್ಲಿರುವವರ ಮನೆ ಮನೆಗೆ ತೆರಳಿ ಮತದಾನ ಅಧಿಕಾರಿಗಳು ಪೋಸ್ಟಲ್ ಬ್ಯಾಲೆಟ್ ಮೂಲಕ ಮತದಾನ ಮಾಡಿಸುವರು.

ಈ ಸಂದರ್ಭದಲ್ಲಿ ಮತ ಯಾರಿಗೆ ಚಲಾಯಿಸುತ್ತಾರೆ ಎಂಬುದನ್ನು ಹೊರತುಪಡಿಸಿ ಉಳಿದ ಎಲ್ಲಾ ಪ್ರಕ್ರಿಯೆಗಳನ್ನು ವಿಡಿಯೋ ಮಾಡಲಾಗುವುದು.

ಮತದಾನ ಮಾಡಿಸಲು ಆರ್.ಒ.ಗಳು ರೂಟ್ ಮ್ಯಾಪ್ ಹಾಗೂ ನಿಗಿದಿತ ಸಮಯ ಹಾಗೂ ದಿನಾಂಕವನ್ನು ನೀಡುವರು ಅ ಸಮಯದಲ್ಲಿ  ನಿರ್ದಿಷ್ಟ ವಿಳಾಸಗಳಿಗೆ ತೆರಳಿ ಮತದಾನವನ್ನು ಬ್ಯಾಲೆಟ್ ಪೇಪರ್‍ನಲ್ಲಿ ಪಡೆಯಬೇಕು ಎಂದು ತಿಳಿಸಿದರು.

ತಂಡದಲ್ಲಿ ಪ್ರಿಸೈಡಿಂಗ್ ಅಧಿಕಾರಿಗಳು,ಮೈಕ್ರೋ ಅಬ್ಸರ್ವರ್ಸ್, ಪೋಲಿಂಗ್ ಅಧಿಕಾರಿಗಳು, ಪೊಲೀಸ್ ಸಿಬ್ಬಂಧಿ ವಿಡಿಯೋಗ್ರಾಫರ್ ಹಾಗೂ ಗ್ರೂಪ್ ಡಿ ಸಿಬ್ಬಂದಿ ಭಾಗವಹಿಸುತ್ತಾರೆ.

ಪೋಸ್ಟಲ್ ಬ್ಯಾಲೆಟ್ ಮತದಾನ ಸಂದರ್ಭದಲ್ಲಿ ಅಭ್ಯರ್ಥಿಗಳು ತಮ್ಮ ಏಜೆಂಟ್‍ಗಳನ್ನು ನೇಮಿಸಿಕೊಳ್ಳಲು ಅವಕಾಶವಿರುತ್ತದೆ.

ಮತದಾನ ಮಾಡುವ ವ್ಯಕ್ತಿ ಅಂಧರಾಗಿದ್ದರೆ ಅಥವಾ ಹಾಸಿಗೆಯ ಮೇಲಿದ್ದು ಅಸಕ್ತರಾಗಿದ್ದರೆ ಅಂತವರು 18 ವರ್ಷ ತುಂಬಿದ ಒಬ್ಬರು ವೋಟಿಂಗ್ ಅಸಿಸ್ಟೆಂಟ್ ಅನ್ನು ನೇಮಿಸಿಕೊಳ್ಳಲು ಅವಕಾಶವಿದೆ ಎಂದು ರಾಜೇಂದ್ರ ಹೇಳಿದ್ದಾರೆ