ಕಲ್ಬುರ್ಗಿ: ಭಜರಂಗದಳ ಸಂಘಟನೆ ನಿಷೇಧ ಮಾಡುವುದಾಗಿ ಪ್ರಣಾಳಿಕೆಯಲ್ಲಿ ಉಲ್ಲೇಖಿಸಿರುವ ಹಿನ್ನೆಲೆ ಮಾಜಿ ಉಪ ಮುಖ್ಯ ಮಂತ್ರಿ ಈಶ್ವರಪ್ಪ ಕಾಂಗ್ರೆಸ್ ಪ್ರಣಾಳಿಕೆಯ ಪ್ರತಿಯನ್ನ ಸುಟ್ಟು ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಲ್ಬುರ್ಗಿಯಲ್ಲಿ ಸುದ್ದಿಗೋಷ್ಠಿ ವೇಳೆ ಈಶ್ವರಪ್ಪ ಕಾಂಗ್ರೆಸ್ ಪ್ರಣಾಳಿಕೆ ಪ್ರತಿಯನ್ನ ಸುಟ್ಟು ಹಾಕಿದರು.
ಬಳಿಕ ಮಾತನಾಡಿದ ಅವರು, ಒಕ್ಕಲಿಗ ಸಮುದಾಯ ನನ್ನ ಬೆನ್ನಿಗೆ ನಿಲ್ಲಿ ಎಂದು ಡಿ.ಕೆ ಶಿವಕುಮಾರ್ ಹೇಳ್ತಾರೆ ಹಿಂದುಳಿದ ವರ್ಗ ನನ್ನ ಜತೆ ಇದ್ದಾರೆಂದು ಸಿದ್ಧರಾಮಯ್ಯ ಹೇಳ್ತಾರೆ. ಎಲ್ಲರನ್ನೂ ಒಟ್ಟಿಗೆ ತೆಗೆದುಕೊಂಡು ಹೋಗುವ ಬಗ್ಗೆ ಹೇಳಲ್ಲ ಎಂದು ಟೀಕಿಸಿದರು.
ಮೊದಲು ಡಿ.ಕೆ ಶಿವಕುಮಾರ್ ಮತ್ತು ಸಿದ್ಧರಾಮಯ್ಯರನ್ನ ಬಂಧಿಸಬೇಕು.ಈ ಬಗ್ಗೆ ಚುನಾವಣಾ ಆಯೋಗಕ್ಕೆ ನಾನು ಮನವಿ ಮಾಡುತ್ತೇನೆ ಎಂದು ತಿಳಿಸಿದರು.
ಕಾಂಗ್ರೆಸ್ ಕೂಡಲೇ ಈ ಪ್ರಣಾಳಿಕೆಯನ್ನು ಹಿಂಪಡೆಯಬೇಕು ಕಾಂಗ್ರೆಸ್ ಸರ್ಕಾರ ಪಿಎಫ್ ಐ ಮೇಲಿದ್ದ 173 ಪ್ರಕರಣ ಹಿಂಪಡೆದಿದೆ. ದೇಶದಲ್ಲಿ ಪಿಎಫ್ಐ ಬ್ಯಾನ್ ಆಗಿದೆ ಅನ್ನೋದೆ ಕಾಂಗ್ರೆಸ್ಗೆ ಗೊತ್ತಿಲ್ಲ ಎಂದು ಈಶ್ವರಪ್ಪ ಟೀಕಿಸಿದರು.
ಭಜರಂಗದಳ ಮುಟ್ಟಿರುವ ಕಾಂಗ್ರೆಸ್ ಗೆ ಸೋಲು ಕಟ್ಟಿಟ್ಟ ಬುತ್ತಿ ಎಂದು ಭವಿಷ್ಯ ನುಡಿದರು.