ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ: ಮೈಸೂರಿನಲ್ಲಿ ವ್ಯಕ್ತಿ ಅರೆಸ್ಟ್

ಮೈಸೂರು: ಬಿಜೆಪಿ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಅವರು ನಾವು ಹಿಂದುತ್ವದಲ್ಲಿ ಮುಂದುವರಿಯುತ್ತೇವೆ‌  ಲಿಂಗಾಯತರ ಅಗತ್ಯವಿಲ್ಲ ಎಂದು ಹೇಳಿಕೆ ನೀಡಿರುವಂತೆ ನಕಲಿ ಪತ್ರಿಕೆಯ ತುಣುಕನ್ನು ಫೇಸ್ ಬುಕ್ ಸಾಮಾಜಿಕ ಜಾಲತಾಣದಲ್ಲಿ ಹರಡುತ್ತಿದ್ದ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ.

ಈ ಬಗ್ಗೆ ಬಿ. ನಿರಂಜನ ಮೂರ್ತಿ ಎಂಬುವರು ನೀಡಿದ ದೂರಿನ ಮೇರೆಗೆ ಲಕ್ಷ್ಮಿಪುರಂ ಠಾಣೆಯಲ್ಲು ಪ್ರಕರಣ ದಾಖಲಾಗಿತ್ತು.

ಈ ಸಂಬಂಧ ತನಿಖೆ ಕೈಗೊಂಡ ಲಕ್ಷ್ಮಿಪುರಂ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆಗೊಳಪಡಿಸಿ ನಂತರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.