ರೌಡಿ ಶೀಟರ್ ಗಳಿಗೆ ಖಾಕಿ ಖಡಕ್ ವಾರ್ನಿಂಗ್

ಮೈಸೂರು: ಚುನಾವಣೆಗೆ ಶಾಂತಿಯುತ ಮತದಾನಕ್ಕಾಗಿ ಮೈಸೂರು ಪೊಲೀಸರು ಎಲ್ಲಾ ಮುಂಜಾಗ್ರತಾ ಕ್ರಮ ಕೈಗೊಂಡಿದ್ದು ರೌಡಿಗಳ ಮೇಲೆ ಹದ್ದಿನ ಕಣ್ಣಿರಿಸಿದ್ದಾರೆ.

ಯಾವುದೇ ಅಹಿತಕರ ಘಟನೆಗಳು  ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಈಗಾಗಲೇ ಹಲವು ರೌಡಿ ಶೀಟರ್ ಗಳನ್ನು ಗಡೀಪಾರು ಮಾಡಿದ್ದಾರೆ.

ಮೈಸೂರು ನಗರದ ವಿವಿದ ಠಾಣಾ ವ್ಯಾಪ್ತಿಯಲ್ಲಿರುವ ರೌಡಿ ಶೀಟರ್ ಗಳಿಗೆ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.

ರೌಡಿ ಶೀಟರ್ ಗಳ ಮನೆಗಳ ಮೇಲೆ ಧಿಢೀರ್ ದಾಳಿ ನಡೆಸಿ ತಪಾಸಣೆ ಮಾಡುತ್ತಿರುವ ಪೊಲೀಸರು ಕಿಡಿಗೇಡಿಗಳಿಗೆ ವಾರ್ನಿಂಗ್ ಕೊಟ್ಟಿದ್ದು ಮತ್ತಷ್ಟು ಬಿಗಿ ಮಾಡುತ್ತಿದ್ದಾರೆ.

ನಗರ ಪೊಲೀಸ್ ಆಯುಕ್ತ ಬಿ.ರಮೇಶ್ ಹಾಗೂ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ಮುತ್ತುರಾಜ್ ರವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಯಿತು.

ಬೆಳ್ಳಂಬೆಳಗ್ಗೆ ದಾಳಿ ನಡೆಸಿ ಸಮಾಜದಲ್ಲಿ ಶಾಂತಿ ಭಂಗ ಉಂಟುಮಾಡದಂತೆ ಎಚ್ಚರಿಸಿದ್ದಾರೆ.

ಸಮಾಜಘಾತುಕ ಶಕ್ತಿಗಳಿಗೂ ಎಚ್ಚರಿಕೆಯ ಸಂದೇಶ ರವಾನಿಸಿದ್ದು,ಶಾಂತಿಭಂಗ ಉಂಟುಮಾಡಿದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.