ಬೆಂಗಳೂರು: ರಾಜ್ಯದಲ್ಲಿ ಸಂಪೂರ್ಣವಾಗಿ ಡ್ರಗ್ಸ್ ನಿಷೇಧಿಸಿ ಎಂದು ನಟಿ ಹಾಗೂ ವಿಧಾನ ಪರಿಷತ್ ಸದಸ್ಯೆ ತಾರಾ ಅನುರಾಧಾ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಒತ್ತಾಯಿಸಿದ್ದಾರೆ.
ನಗರದಲ್ಲಿ ಮಂಗಳವಾರ ತಾರಾ ಅವರು ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.
ರಾಜ್ಯವನ್ನು ಡ್ರಗ್ಸ್ ಮುಕ್ತ ರಾಜ್ಯವನ್ನಾಗಿ ಮಾಡಬೇಕು ಎಂದು ತಾರಾ ಸಿಎಂರಲ್ಲಿ ಮನವಿ ಮಾಡಿದ್ದಾರೆ.
ಈ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಪತ್ರ ಬರೆದಿದ್ದೇನೆ ಎಂದು ಅವರು ತಿಳಿಸಿದರು.
ಕೆಲ ಶಾಲಾ ಕಾಲೇಜು ವಿದ್ಯಾರ್ಥಿಗಳು, ಯುವ ಜನತೆ, ಚಲನಚಿತ್ರರಂಗದ ಹಲವಾರು ಡ್ರಗ್ಸ್ ಸೇವೆನೆ ಮಾಡುತ್ತಾರೆಂಬ ಆರೋಪ ಕೇಳಿ ಬರುತ್ತಿರುವುದು ವಿಷಾದದ ಸಂಗತಿ ಎಂದು ಅವರು ತಿಳಿಸಿದರು.
ಬೇರೆ ದೇಶಗಳಲ್ಲಿ ಡ್ರಗ್ಸ್ ಸಂಪೂರ್ಣ ನಿಷೇಧವಾಗಿದೆ. ಅದೇರೀತಿ ನಮ್ಮಲ್ಲಿಯೂ ನಿಷೇಧಿಸಬೇಕು ಎಂದು ಅವರು ಹೇಳಿದರು.