ಮೈಸೂರು: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆ ಕಾರ್ಯಕ್ಕೆ ಕ್ಷಣಗಣನೆ ಪ್ರಾರಂಭವಾಗಿದೆ.ಅಭ್ಯರ್ಥಿಗಳ ಎದೆಯಲ್ಲಿ ಡವ,ಡವ ಶುರುವಾಗಿದೆ.
ಮೇ.13 ಶನಿವಾರ ನಡೆಯಲಿದ್ದು ಎಲ್ಲಾ ಸಿದ್ದತೆ ಪೂರ್ಣಗೊಂಡಿದೆ.
ಜಿಲ್ಲೆಯಲ್ಲಿ ಒಟ್ಟು11 ವಿಧಾನಸಭಾ ಕ್ಷೇತ್ರಗಳಿದ್ದು,ಮತಎಣಿಕೆಯು ಮೈಸೂರಿನ ಮಹಾರಾಣಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ ಮೇ.13 ಶನಿವಾರ ಬೆಳಿಗ್ಗೆ 8 ಗಂಟೆಗೆ ಪ್ರಾರಂಭವಾಗಲಿದೆ.
ಭದ್ರತಾ ಕೊಠಡಿಗೆ ಮೂರು ಸುತ್ತಿನ ಭದ್ರತೆ ಒದಗಿಸಲಾಗಿದ್ದು,ಸಿ.ಎ.ಪಿ.ಎಫ್ ತುಕಡಿ, ಸಶಸ್ತ್ರ ಮೀಸಲು ಪಡೆ ಹಾಗೂ ಸ್ಧಳೀಯ ಮೀಸಲು ಪಡೆಯಿಂದ ಭದ್ರತೆ ನೀಡಲಾಗಿದೆ.
ಮತ ಎಣಿಕೆಗಾಗಿ ಮೈಸೂರಿನ ಮಹಾರಾಣಿ ವಾಣಿಜ್ಯ ಕಾಲೇಜಿನಲ್ಲಿ ಜಿಲ್ಲಾಡಳಿತ ಸಕಲ ಸಿದ್ದತೆ ಮಾಡಿಕೊಂಡಿದ್ದು ಟೇಬಲ್ ಗಳನ್ನು ಅಳವಡಿಸಿ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಂಡಿದೆ.
ಈ ಕಾಲೇಜಿನ ರಸ್ತೆಗಳಲ್ಲಿ ಮೇ 13ರ ಬೆಳಿಗ್ಗೆ ಐದರಿಂದ ಸಂಜೆ ಐದರವರೆಗೆ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಿ ಪೊಲೀಸ್ ಆಯುಕ್ತ ರಮೇಶ್ ಅವರು ಆದೇಶ ಹೊರಡಿಸಿದ್ದಾರೆ.
ಹಾಗಾಗಿ ಕೆಎಸ್ಆರ್ಟಿಸಿ ಬಸ್ಸುಗಳು ಸೇರಿದಂತೆ ಎಲ್ಲಾ ಮಾದರಿಯ ವಾಹನಗಳ ಸಂಚಾರಕ್ಕೆ ಬದಲಿ ಮಾರ್ಗ ಕಲ್ಪಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಮತ ಎಣಿಕೆ ಕಾರ್ಯಕ್ಕೆ ನಿಯೋಜನೆಗೊಂಡಿರುವ ಸಿಬ್ಬಂದಿ, ಪೊಲೀಸರು, ಅಭ್ಯರ್ಥಿಗಳ ಏಜೆಂಟರು, ಮಾಧ್ಯಮದವರ ವಾಹನ ನಿಲುಗಡೆಗೆ ಪ್ರತ್ಯೇಕ ಸ್ಥಳಗಳನ್ನು ನಿಗದಿಗೊಳಿಸಲಾಗಿದೆ.
ಇವಿಎಂಗಳನ್ನು ಇರಿಸಿರುವ ಮಹಾರಾಣಿ ಕಾಲೇಜಿನ ಸುತ್ತಮುತ್ತ ಬಿಗಿ ಭದ್ರತೆ ಮಾಡಲಾಗಿದೆ.
11 ವಿಧಾನಸಭಾ ಕ್ಷೇತ್ರಗಳ ವಿದ್ಯುನ್ಮಾನ ಮತಯಂತ್ರಗಳನ್ನು ಇದೇ ಕಾಲೇಜಿನಲ್ಲಿ ಇರಿಸಲಾಗಿದೆ.
ಮೊದಲು ಅಂಚೆ ಮತಗಳನ್ನು ಲೆಕ್ಕ ಹಾಕಿ ಆನಂತರ ಇವಿಎಂ ಗಳಲ್ಲಿ ದಾಖಲಾಗಿರುವ ಮತಗಳ ಎಣಿಕೆ ಕಾರ್ಯ ನಡೆಸಲಾಗುತ್ತದೆ.