ಮೈಸೂರು: ಬೆಳ್ಳಂಬೆಳಗ್ಗೆ ಮೈಸೂರಿನಲ್ಲಿ ಲೋಕಾಯುಕ್ತ ಪೊಲೀಸರು ನಾಲ್ಕು ಅಧಿಕಾರಿಗಳ ಮನೆ ಮೇಲೆ ದಾಳಿ ಮಾಡಿ ಶಾಕ್ ನೀಡಿದ್ದಾರೆ.
ಮೈಸೂರು ಮಹಾನಗರ ಪಾಲಿಕೆ ಇಂಜಿನಿಯರ್ ಮಹೇಶ್ ಕುಮಾರ್ ಅವರ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ಮಾಡಲಾಗಿದೆ.
ಮೈಸೂರಿನ ನಿವೇದಿತಾ ನಗರ ಸಂಕ್ರಾಂತಿ ವೃತ್ತದಲ್ಲಿರುವ ಮಹೇಶ್ ಕುಮಾರ್
ಮನೆಯಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ. ತೋಟದ ಮನೆ ಸೇರಿ ಹಲವು ಕಡೆ ದಾಳಿ ನಡೆಸಲಾಗಿದೆ.
13 ತಂಡ ಏಕಕಾಲಕ್ಕೆ ದಾಳಿ ನಡೆಸಿದೆ.
ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಬಗ್ಗೆ ಬಂದ ದೂರಿನ ಮೇರೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ
ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.
ಶಿವಶಂಕರ ಮೂರ್ತಿ- ನಂಜನಗೂಡು ತಾಲ್ಲೂಕು ಸಬ್ ರಿಜಿಸ್ಟ್ರಾರ್.
ನಾಗೇಶ್ – ಅಸಿಸ್ಟೆಂಟ್ ಇಂಜಿನಿಯರ್ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ.
ಮುತ್ತು – ಮುಖ್ಯ ಲೆಕ್ಕಾಧಿಕಾರಿ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ,ಇವರುಗಳ ಮನೆ ಮೇಲೂ ದಾಳಿ ನಡೆದಿದೆ.
ಲೋಕಾಯುಕ್ತ ಎಸ್ ಪಿ ಸುರೇಶ್ ಬಾಬು ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ
ಮೈಸೂರಿನ ನಾಲ್ಕೂ ಅಧಿಕಾರಿಗಳ ಮನೆಯಲ್ಲಿ ಪರಿಶೀಲನೆ ನಡೆಸಿ ದಾಖಲೆಗಳನ್ನು ಪರಿಶೀಲಿಸಿ ಕೆಲವನ್ನು ವಶಪಡಿಸಿಕೊಳ್ಳಲಾಗಿದೆ.