ಮೈಸೂರು: ಪರೀಕ್ಷೆಯಲ್ಲಿ ಫೇಲಾಗಿದ್ದರಿಂದ ಬೇಸತ್ತ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನ ಶ್ರೀರಾಂಪುರ ಬಡಾವಣೆಯಲ್ಲಿ ನಡೆದಿದೆ.
ತಮಿಳುನಾಡಿನ ನೀಲಗಿರಿ ಜಿಲ್ಲೆಯ ಜಿಷ್ಣ(19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.
ಮೈಸೂರಿನ ಶ್ರೀರಾಂಪುರದ ಖಾಸಗಿ ಪದವಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಈ ಘಟನೆ ನಡೆದಿದೆ.
ಕಂಪ್ಯೂಟರ್ ಸೈನ್ಸ್ ವಿಷಯದಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದ ಜಿಷ್ಣ,ಈ ಬಾರಿಯ ಸೆಮಿಸ್ಟರ್‌ನಲ್ಲಿ ಫೇಲಾಗಿದ್ದರೆಂದು ಹೇಳಲಾಗಿದೆ.
ಇದರಿಂದ ಮನನೊಂದು ಕಾಲೇಜಿನ ಹಾಸ್ಟೆಲ್ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಸಂಬಧ ಮೈಸೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.