ಮೈಸೂರು: ಮೈಸೂರಿನ ಚಾಮುಂಡಿಬೆಟ್ಟದಲ್ಲಿ ನಡೆಯುವ ಈ ಬಾರಿಯ ಆಷಾಡ ಶುಕ್ರವಾರದ ಕಾರ್ಯಕ್ರಮ ಯಶಸ್ವಿಗೊಳಿಸಲು ಅಧಿಕಾರಿಗಳು ಈಗಿನಿಂದಲೇ ಸಿದ್ದತೆ ಮಾಡಿಕೊಳ್ಳಬೇಕೆಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ ಹೆಚ್ .ಸಿ ಮಹದೇವಪ್ಪ ಸಲಹೆ ನೀಡಿದರು.
ಸೋಮವಾರ ಮಹದೇವಪ್ಪ ಅವರು ಈ ಸಂಬಂಧ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಭಕ್ತರಿಗೆ ಅನುಕೂಲವಾಗಬೇಕು,ಅವರಿಗೆ ಯಾವುದೇ ಅಡಚಣೆ ಉಂಟಾಗದಂತೆ ವ್ಯವಸ್ಥೆಗೊಳಿಸಬೇಕು ಎಂದು ಸೂಚಿಸಿದರು.
ಪ್ರತಿಯೊಬ್ಬ ಪ್ರಜೆಗೂ ಧಾರ್ಮಿಕ ಸ್ವಾತಂತ್ರ್ಯವಿದೆ ಹೀಗಾಗಿ ಭಕ್ತರಿಗೆ ಯಾವುದೇ ಅಡಚಣೆ ಉಂಟಾಗದಂತೆ ಕೆಲಸ ನಿರ್ವಹಿಸಿ ಎಂದು ಸಚಿವರು ತಿಳಿಸಿದರು.
ಚಾಮುಂಡಿ ಬೆಟ್ಟದ ಚಾಮುಂಡೇಶ್ವರಿ ದೇವಸ್ಧಾನದಲ್ಲಿ 2023 ನೇ ಆಷಾಢ ಶುಕ್ರವಾರಗಳು ಹಾಗೂ ಅಮ್ಮನವರ ಜನ್ಮೋತ್ಸವ ಅಂಗವಾಗಿ ಕೈಗೊಳ್ಳಬೇಕಾದ ಸಿದ್ದತೆಗಳ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ಅಗತ್ಯ ಕ್ರಮವಹಿಸಬೇಕು ಎಂದು ತಿಳಿಸಿದರು.
ಈ ಹಿಂದೆ ನಡೆದಿರುವ ಕ್ರಮಗಳನ್ನ ಅನುಸರಿ, ಯಾವುದು ಲೋಪವಿದಿಯೋ ಅಂತಹ ವ್ಯವಸ್ಥೆಗಳನ್ನ ಬಿಟ್ಟು ಜನರಿಗೆ ಅನುಕೂಲ ವಾಗುವ ಎಲ್ಲಾ ವ್ಯವಸ್ಥೆಗಳನ್ನು ನಿರ್ವಹಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಶಾಸಕರಾದ ತನ್ವಿರ್ ಸೇಠ್, ಹರೀಶ್ ಗೌಡ, ಕ್ಷೇತ್ರದ ಶಾಸಕರಾದ ಶ್ರೀವತ್ಸ, ಜಿಲ್ಲಾಧಿಕಾರಿ ಡಾ ಕೆ.ವಿ ರಾಜೇಂದ್ರ, ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್, ಎಸ್ಪಿ ಸೀಮಾ ಲಾಟ್ಕರ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.